ಗುರುವಾರ , ಅಕ್ಟೋಬರ್ 21, 2021
29 °C

ಅಫ್ಗನ್‌ನಲ್ಲಿ ಭಾರತೀಯನ ಅಪಹರಣ; ತಾಲಿಬಾನ್ ಸಂಪರ್ಕದಲ್ಲಿ ಭಾರತ

ಅನಿರ್ಬನ್ ಭೌಮಿಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾರತೀಯ ನಾಗರಿಕನ ಅಪಹರಣಕ್ಕೆ ಸಂಬಂಧಿಸಿದಂತೆ ತಾಲಿಬಾನ್ ಸರ್ಕಾರದೊಂದಿಗೆ ಭಾರತ ಸಂಪರ್ಕದಲ್ಲಿದೆ ಎಂದು ವರದಿಯಾಗಿದೆ.

'ನಾವು ಸಂಬಂಧಪಟ್ಟ ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಈ ಘಟನೆ ಬಗ್ಗೆ ಸ್ಥಳೀಯ ಅಧಿಕಾರಿಗಳು ಕೈಗೊಂಡಿರುವ ತನಿಖೆ ಬಗ್ಗೆ ವರದಿಯನ್ನು ಗಮನಿಸಿದ್ದೇವೆ. ಪರಿಸ್ಥಿತಿಯ ಮೇಲೆ ನಿಗಾ ವಹಿಸುತ್ತಿದ್ದೇವೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಬನ್ಸ್ರಿಲಾಲ್ ಅರೆಂದೆಹ್ ಅವರನ್ನು ಮಂಗಳವಾರ ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಅರೆಂದೆಹ್ ಭಾರತೀಯ ನಾಗರಿಕ ಎಂಬುದು ತಿಳಿದು ಬಂದಿದೆ. ಆದರೆ ಸರ್ಕಾರವು ಪೌರತ್ವ ಸ್ಥಿತಿಗತಿಯನ್ನು ಪರಿಶೀಲಿಸುತ್ತಿದೆ ಎಂದು ಬಾಗ್ಚಿ ಹೇಳಿದ್ದಾರೆ.

ಅರೆಂದೆಹ್ ಅವರ ಕುಟುಂಬವು ಹರಿಯಾಣದ ಫರಿದಾಬಾದ್‌ನಲ್ಲಿ ನೆಲೆಸಿದೆ. ಅವರು ಕಳೆದ ಎರಡು ದಶಕದಿಂದ ಕಾಬೂಲ್‌ನಲ್ಲಿ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂಬುದು ತಿಳಿದು ಬಂದಿದೆ.

ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆ ನಿಲುಗಡೆಗೊಂಡಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಪುನರಾರಂಭವಾದರೆ ಭಾರತೀಯರ ತೆರವು ಕಾರ್ಯಾಚರಣೆ ಸುಲಭವಾಗಲಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು