ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಕಳವಳಕಾರಿ ಬೆಳವಣಿಗೆ ಮೇಲೆ ನಿಗಾ: ಆ್ಯಂಟನಿ ಬ್ಲಿಂಕನ್‌

Last Updated 12 ಏಪ್ರಿಲ್ 2022, 20:11 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತದಲ್ಲಿ ಇತ್ತೀಚೆಗೆ ಆಗಿರುವ ಕೆಲವು ‘ಕಳವಳಕಾರಿ ಬೆಳವಣೆಗೆ’ಗಳ ಮೇಲೆ ನಿಗಾ ಇರಿಸಲಾಗಿದೆ. ಇದರಲ್ಲಿ ಸರ್ಕಾರಿ ಅಧಿಕಾರಿಗಳು ನಡೆಸಿದ ಮಾನವ ಹಕ್ಕುಗಳ ಉಲ್ಲಂಘನೆಯೂ ಸೇರಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ ಹೇಳಿದ್ದಾರೆ. ಸಮಾನವಾದ ಪ್ರಜಾಸತ್ತಾತ್ಮಕ ಮೌಲ್ಯಗಳ ಕುರಿತಂತೆ ಭಾರತದ ಜತೆಗೆ ನಿಯಮಿತವಾಗಿ ಸಂವಾದ ನಡೆಸಲಾಗುತ್ತಿದೆ ಎಂದಿದ್ದಾರೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್‌ ಆಸ್ಟಿನ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಜತೆಗೆ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಬ್ಲಿಂಕನ್‌ ಹೀಗೆ ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ವಿದೇಶಾಂಗ ಮತ್ತು ರಕ್ಷಣಾ ಸಚಿವರ 2+2 ಮಾತುಕತೆಗಾಗಿ ರಾಜನಾಥ್‌ ಮತ್ತು ಜೈಶಂಕರ್‌ ಅವರು ಅಮೆರಿಕದಲ್ಲಿದ್ದಾರೆ. ಮಾತುಕತೆಯು ಸೋಮವಾರ ನಡೆದಿದೆ.

ಸರ್ಕಾರದ ಅಧಿಕಾರಿಗಳು, ಪೊಲೀಸರು ಮತ್ತು ಜೈಲು ಅಧಿಕಾರಿಗಳು ನಡೆಸಿರುವ ಮಾನವ ಹಕ್ಕುಗಳ ಉಲ್ಲಂಘನೆಯೂ ಕಳವಳಕಾರಿ ವಿದ್ಯಮಾನಗಳಲ್ಲಿ ಸೇರಿವೆ ಎಂದು ಮಾಧ್ಯಮಗೋಷ್ಠಿಯ ಆರಂಭದಲ್ಲಿಯೇ ಬ್ಲಿಂಕನ್‌ ಹೇಳಿದರು. ಈ ಬಗ್ಗೆ ಹೆಚ್ಚಿನ ವಿವರಣೆಯನ್ನು ಅವರು ನೀಡಿಲ್ಲ.

ಮಾನವ ಹಕ್ಕುಗಳ ರಕ್ಷಣೆಯಂತಹ ಪ್ರಜಾಸತ್ತಾತ್ಮಕ ಮೌಲ್ಯಗಳ ಬದ್ಧತೆಯನ್ನು ನಾವು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ನಾಗರಿಕ ಸ್ವಾತಂತ್ರ್ಯವು ಕರಗಿ ಹೋಗಿದೆ ಎಂದು ವಿದೇಶಿ ಸರ್ಕಾರಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಈ ಹಿಂದೆ ಮಾಡಿದ್ದ ಆರೋಪಗಳನ್ನು ಭಾರತವು ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT