ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾದಲ್ಲಿ ಪ್ರವಾಹ, ಭೂಕುಸಿತದಿಂದ 75 ಮಂದಿ ಸಾವು: ಹಲವರು ನಾಪತ್ತೆ

Last Updated 5 ಏಪ್ರಿಲ್ 2021, 5:38 IST
ಅಕ್ಷರ ಗಾತ್ರ

ಜಕಾರ್ತಾ: ಇಂಡೊನೇಷ್ಯಾ ಮತ್ತು ನೆರೆಯ ಪೂರ್ವ ಟಿಮೋರ್‌ನಲ್ಲಿ ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಿಂದಾಗಿ 75 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದ ಸೃಷ್ಟಿಸಿದ ಪ್ರವಾಹದಿಂದಾಗಿ ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಿಂದ ಪೂರ್ವ ಟಿಮೋರ್‌ವರೆಗೆ ವ್ಯಾಪಿಸಿರುವ ದ್ವೀಪಗಳಲ್ಲಿ ತೀವ್ರ ಹಾನಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಣೆಕಟ್ಟುಗಳು ಉಕ್ಕಿ ಹರಿಯುತ್ತಿವೆ. ಪರಿಣಾಮವಾಗಿ ಸಾವಿರಾರು ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಪರಿಹಾರ ಕಾರ್ಯಾಚರಣೆ ನಡೆಸುತ್ತಿರುವ ತಂಡದವರು ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ.

‘ಘಟನೆಯಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ. 42 ಮಂದಿ ಕಾಣೆಯಾಗಿದ್ದಾರೆ. ಈ ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ‘ ಎಂದು ಇಂಡೊನೇಷ್ಯಾ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ರಾಡಿತ್ಯ ಜಟಿ ‘ಮೆಟ್ರೊ ವಾಹಿನಿ‘ಗೆ ತಿಳಿಸಿದ್ದಾರೆ.

ಇಂಡೊನೇಷ್ಯಾ ಮತ್ತು ಆಸ್ಟ್ರೇಲಿಯಾ ನಡುವಿರುವ ಪುಟ್ಟ ದ್ವೀಪ ಪೂರ್ವ ಟಿಮೊರ್‌ನಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT