ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ | ಕಂದಕಕ್ಕೆ ಉರುಳಿದ ಬಸ್‌: 15 ಸಾವು

Last Updated 20 ಫೆಬ್ರವರಿ 2023, 15:37 IST
ಅಕ್ಷರ ಗಾತ್ರ

ಲಾಹೋರ್‌: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಬಸ್ಸೊಂದು ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನಿಂದ ಲಾಹೋರ್‌ಗೆ ವೇಗವಾಗಿ ಚಲಿಸುತ್ತಿದ್ದ ಬಸ್‌ ಭಾನುವಾರ ರಾತ್ರಿ ಲಾಹೋರ್‌ಗೆ 240 ಕಿ.ಮೀ. ದೂರದಲ್ಲಿರುವ ಕಲ್ಲಾರ್‌ ಕಹಾರ್‌ ಸಾಲ್ಟ್‌ ರೇಂಜ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದೆ.

ಬಸ್‌ ಪಲ್ಟಿ ಹೊಡೆಯುವ ಮೊದಲು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ರಕ್ಷಣಾ ಅಧಿಕಾರಿ ಮೊಹಮ್ಮದ್‌ ಫಾರೂಕ್‌ ತಿಳಿಸಿದ್ದಾರೆ.

ಬಸ್‌ನ ಬ್ರೇಕ್‌ ವೈಫಲ್ಯವೇ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT