ಮಂಗಳವಾರ, ಡಿಸೆಂಬರ್ 7, 2021
20 °C

ಮಾಸ್ಕೊ: ಮುಂದಿನ ದಿನಗಳಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ದಾಖಲೆ–ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಸ್ಕೊ: ಮುಂದಿನ ವಾರದ ಕೊನೆಯಲ್ಲಿ ಅಥವಾ ಆರಂಭದಲ್ಲಿ ರಷ್ಯಾ ರಾಜಧಾನಿಯಲ್ಲಿ ಕೋವಿಡ್‌ 19 ಸೋಂಕಿನ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಮುಟ್ಟಲಿದೆ ಎಂದು ಮಾಸ್ಕೊ ಮೇಯರ್‌ ಸೆರ್ಗೆಯ್‌ ಸೋಬಯಾನಿಕ್‌ ಅಂದಾಜಿಸಿದ್ದಾರೆ ಎಂದು ಇಂಟರ್‌ಫ್ಯಾಕ್ಟ್‌ ಸುದ್ದಿ ಸಂಸ್ಥೆ ಶುಕ್ರವಾರ ಹೇಳಿದೆ.  

ರಷ್ಯಾದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್‌ ಪ್ರಕರಣಗಳು ಮತ್ತು ಸಾವಿನ ಪ್ರಕರಣಗಳು ವರದಿಯಾಗಿದೆ. ಈ ಸಂಬಂಧ ಮುನ್ನೆಚ್ಚರಿಕೆಯಾಗಿ ಇದೇ 28 ರಿಂದ ಮಾಸ್ಕೊದಲ್ಲಿ ಭಾಗಶಃ ಲಾಕ್‌ಡೌನ್‌ ಜಾರಿಯಾಗಲಿದೆ.

ಔಷಧಾಲಯ, ಮಾರುಕಟ್ಟೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು