ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದಾದ್ಯಂತ ಮುಸ್ಲಿಮರು ಹಿಂಸಾಚಾರಕ್ಕೆ ಗುರಿಯಾಗುತ್ತಿದ್ದಾರೆ: ಜೋ ಬೈಡನ್

Last Updated 3 ಮೇ 2022, 10:21 IST
ಅಕ್ಷರ ಗಾತ್ರ

ವಾಷಿಂಗ್ಟನ್:ವಿಶ್ವದಾದ್ಯಂತ ಮುಸ್ಲಿಮರು ಹಿಂಸಾಚಾರಗಳಿಗೆ ಗುರಿಯಾಗುತ್ತಿದ್ದಾರೆ. ಹಲವು ಸವಾಲುಗಳು ಹಾಗೂ ಬೆದರಿಕೆಗಳನ್ನು ಎದುರಿಸುತ್ತಿದ್ದರೂ ಮುಸ್ಲಿಮರು ಅಮೆರಿಕವನ್ನು ಬಲಿಷ್ಠಗೊಳಿಸುತ್ತಿದ್ದಾರೆ ಎಂದು ಅಧ್ಯಕ್ಷ ಜೋ ಬೈಡನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈದ್‌–ಉಲ್‌ ಫಿತ್ರ್‌ ಆಚರಣೆ ಪ್ರಯುಕ್ತ ಶ್ವೇತಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ರಾಯಭಾರಿಯಾಗಿ ಸೇವೆ ಸಲ್ಲಿಸಲು ಮುಸ್ಲಿಂ ವ್ಯಕ್ತಿಯೊಬ್ಬರನ್ನು ನೇಮಿಸಲಾಗಿದೆ’ ಎಂದು ಹೇಳಿದ್ದಾರೆ.

‘ವಿಶ್ವದಾದ್ಯಂತ ಮುಸ್ಲಿಮರನ್ನುಹಿಂಸಾಚಾರಕ್ಕೆ ಗುರಿಪಡಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ತುಳಿತಕ್ಕೊಳಗಾದವರ ವಿರುದ್ಧ ಯಾರೂ ತಾರತಮ್ಯ ಮಾಡಬಾರದು. ಜೊತೆಗೆ ಮುಸ್ಲಿಮರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯುಂಟು ಮಾಡಬಾರದು’ ಎಂದು ಬೈಡನ್ ಹೇಳಿದ್ದಾರೆ.

‘ರೋಹಿಂಗ್ಯಾಗಳು ಸೇರಿದಂತೆ ಹಿಂಸೆ, ಸಂಘರ್ಷಗಳನ್ನು ಎದುರಿಸುತ್ತಿರುವ ಎಲ್ಲರನ್ನು ಒಳಗೊಂಡಂತೆ ಈ ಪವಿತ್ರ ದಿನವನ್ನು ಆಚರಿಸಲು ಸಾಧ್ಯವಾಗದ ಎಲ್ಲರನ್ನು ನಾವು ಸ್ಮರಿಸುತ್ತೇವೆ’ ಎಂದು ಬೈಡನ್ ಹೇಳಿದ್ದಾರೆ.

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೂ ಈದ್‌–ಉಲ್‌ ಫಿತ್ರ್‌ ಅಂಗವಾಗಿ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT