ಬುಧವಾರ, ಏಪ್ರಿಲ್ 21, 2021
32 °C

ಭಾರತದಲ್ಲಿರುವ ಮ್ಯಾನ್ಮಾರ್‌ನ 8 ಪೊಲೀಸರನ್ನು ಹಸ್ತಾಂತರಿಸಲು ಮನವಿ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್‌ನ ಪೊಲೀಸ್‌ ಅಧಿಕಾರಿಗಳನ್ನು ಹಸ್ತಾಂತರಿಸುವಂತೆ ಮ್ಮಾನ್ಮಾರ್‌ ಕೋರಿದೆ.

ಫೆಬ್ರುವರಿ 1ರ ಮಿಲಿಟರಿ ದಂಗೆಯನ್ನು ವಿರೋಧಿಸಿ ಮ್ಯಾನ್ಮಾರ್‌ನಲ್ಲೆಡೆ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಗಳಲ್ಲಾದ ಹಿಂಸಾಚಾರದಲ್ಲಿ ಹಲವಾರು ಮಂದಿ ಮೃತ‍ಪಟ್ಟಿದ್ದಾರೆ. ಮಿಲಿಟರಿ ಆಡಳಿತದಡಿ ಕೆಲಸ ಮಾಡಲು ಇಚ್ಛಿಸದ ಸುಮಾರು 30 ಮ್ಯಾನ್ಮಾರ್‌ ಪೊಲೀಸರು ಮತ್ತು ಅವರ ಕುಟುಂಬದವರು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

‘ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧವನ್ನು ಹೀಗೆ ಮುಂದುವರಿಸುವ ನಿಟ್ಟಿನಲ್ಲಿ ಭಾರತದಲ್ಲಿರುವ 8 ಪೊಲೀಸ್‌ ಅಧಿಕಾರಿಗಳನ್ನು ಮ್ಯಾನ್ಮಾರ್‌ಗೆ ಹಸ್ತಾಂತರಿಸಬೇಕು’ ಎಂದು ಮಿಜೋರಾಂನ ಚಂಪೈ ಜಿಲ್ಲೆಯ ಉಪ ಆಯುಕ್ತರಾದ ಮರಿಯಾ ಸಿ.ಟಿ ಜುವಾಲಿ ಅವರಿಗೆ ಮ್ಯಾನ್ಮಾರ್‌ನ ಫಾಲಂನ ಹಿರಿಯ ಅಧಿಕಾರಿಯೊಬ್ಬರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮರಿಯಾ,‘ಈ ಕುರಿತು ಗೃಹ ಸಚಿವಾಲಯಕ್ಕೆ ತಿಳಿಸಲಾಗಿದೆ. ಗೃಹ ಸಚಿವಾಲಯ ನೀಡುವ ನಿರ್ದೇಶನದ ಮೇರೆಗೆ ಮುಂದಿನ ಕ್ರಮಕೈಗೊಳ್ಳಲಾಗುವುದು’ ಎಂದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು