ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಪತ್ರಕರ್ತನ ವಿರುದ್ಧ ದೇಶದ್ರೋಹ, ಭಯೋತ್ಪಾದನೆ ಆರೋಪ

Last Updated 10 ನವೆಂಬರ್ 2021, 5:47 IST
ಅಕ್ಷರ ಗಾತ್ರ

ಯಾಂಗೂನ್‌: ಮ್ಯಾನ್ಮಾರ್‌ನಲ್ಲಿರುವ ಮಿಲಿಟರಿ ಸರ್ಕಾರ ಕಳೆದ ಮೇ ತಿಂಗಳಲ್ಲಿ ಬಂಧಿಸಿರುವ ಅಮೆರಿಕದ ಪತ್ರಕರ್ತನ ವಿರುದ್ಧ ದೇಶದ್ರೋಹ ಮತ್ತು ಭಯೋತ್ಪಾದನೆ ಆರೋಪಗಳನ್ನು ಹೊರಿಸಿದ್ದು, ಅಪರಾಧವು ಸಾಬೀತಾದರೆ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ ಎಂದು ಅವರ ವಕೀಲರು ಬುಧವಾರ ತಿಳಿಸಿದ್ದಾರೆ.

ಅಮೆರಿಕದ ಡ್ಯಾನಿ ಫೆನ್‌ಸ್ಟೆರ್‌(37), ದೇಶದ್ರೋಹ ಮತ್ತು ಭಯೋತ್ಪಾದನೆ ಆರೋಪ ಎದುರಿಸುತ್ತಿರುವ ಪತ್ರಕರ್ತ. ಕಳೆದ ಒಂದು ವರ್ಷದಿಂದ ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ ತಿಂಗಳಲ್ಲಿ ತಮ್ಮ ಕುಟುಂಬವನ್ನು ನೋಡಲು ಅಮೆರಿಕಕ್ಕೆ ತೆರಳುವ ವೇಳೆ ಅವರನ್ನು ಬಂಧಿಸಿ, ಭಯೋತ್ಪಾದನಾ ನಿಗ್ರಹ ಹಾಗೂ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 16ರಂದು ವಿಚಾರಣೆ ಆರಂಭವಾಗಲಿದೆ.

ಕಾನೂನುಬಾಹಿರ ಸಂಘಟನೆಗಳೊಂದಿಗೆ ನಂಟು ಮತ್ತು ವಲಸೆ ಕಾನೂನನ್ನು ಉಲ್ಲಂಘಿಸಿದ ಆರೋಪದ ಮೇಲೆ ಅವರನ್ನು ಯಾಂಗೂನ್‌ನ ಜೈಲಿನಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT