ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪ: ಸೂಕಿಗೆ 6 ವರ್ಷ ಜೈಲು

Last Updated 15 ಆಗಸ್ಟ್ 2022, 11:32 IST
ಅಕ್ಷರ ಗಾತ್ರ

ಬ್ಯಾಂಕಾಕ್‌: ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ನಾಯಕಿ ಆಂಗ್ ಸಾನ್‌ ಸೂಕಿ ಅವರನ್ನು ಇನ್ನೂ ನಾಲ್ಕು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿ ಎಂದು ಹೇಳಿರುವ ಸೇನಾಡಳಿತದ ನ್ಯಾಯಾಲಯ, ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈಗಾಗಲೇ ಅವರು 11 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಹೊಸದಾಗಿ 6 ವರ್ಷಗಳ ಜೈಲು ಶಿಕ್ಷೆ ಅದಕ್ಕೆ ಸೇರ್ಪಡೆಯಾಗಿದೆ.

ವಿಚಾರಣೆಯನ್ನು ಗೋಪ್ಯವಾಗಿ ನಡೆಸಲಾಯಿತು. ಒಟ್ಟು ನಾಲ್ಕು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆದು ಶಿಕ್ಷೆ ಪ್ರಕಟಿಸಲಾಯಿತು. ಪ್ರತಿ ಹಗರಣಕ್ಕೆ ಸಂಬಂಧಿಸಿದಂತೆ ಅವರಿಗೆ ತಲಾ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, ಮೂರು ಶಿಕ್ಷೆಗಳನ್ನು ಒಟ್ಟಿಗೆ ಅನುಭವಿಸಲು ಅವಕಾಶ ನೀಡಿದ್ದರಿಂದ ಒಟ್ಟಾರೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿದಂತಾಗಿದೆ ಎಂದು ಕಾನೂನು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಜಮೀನೊಂದನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಮೊತ್ತಕ್ಕೆ ಬಾಡಿಗೆಗೆ ನೀಡಿ, ದಾನದ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ದೇಣಿಗೆಯಿಂದ ವಸತಿ ಕಟ್ಟಡ ನಿರ್ಮಿಸಿದ ಆರೋಪದ ಮೇರೆಗೆ ಸೂಕಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT