ವರ್ಷದಲ್ಲಿ ಚುನಾವಣೆ : ಮ್ಯಾನ್ಮಾರ್ ಸೇನೆ ಭರವಸೆ

ನೇಪಿಟಾ (ಮ್ಯಾನ್ಮಾರ್): ಒಂದು ವರ್ಷದ ತುರ್ತು ಪರಿಸ್ಥಿತಿ ಮುಕ್ತಾಯಗೊಂಡ ಬಳಿಕ ಚುನಾವಣೆವನ್ನು ನಡೆಸುವುದಾಗಿ ಮ್ಯಾನ್ಮಾರ್ ಸೇನೆಯು ಸೋಮವಾರ ತಿಳಿಸಿದೆ.
ಮ್ಯಾನ್ಮಾರ್‌ನಲ್ಲಿ ದಂಗೆಯೆದ್ದಿರುವ ಸೇನೆಯು ಅಧಿಕಾರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಒಂದು ವರ್ಷದ ವರೆಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
2008ರ ಸಂವಿಧಾನದ ಪ್ರಕಾರ ಎಲ್ಲಾ ಸರ್ಕಾರಿ ಕಾರ್ಯಗಳನ್ನು ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಮೀನ್ ಆಂಗ್ ಲಾಯ್ ಅವರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಸರ್ಕಾರದ ದೂರದರ್ಶನದಲ್ಲಿ ಪ್ರಕಟಿಸಲಾಗಿದೆ.
‘ದೇಶದಲ್ಲಿ ಚುನಾವಣೆ ನಡೆದ ಬಳಿಕ, ಗೆದ್ದವರಿಗೆ ಸೇನೆಯು ಅಧಿಕಾರ ಹಸ್ತಾಂತರ ಮಾಡಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಳೆದ ನವೆಂಬರ್‌ನಲ್ಲಿ ನಡೆದ ಸಾರ್ವತಿಕ ಚುನಾವಣೆಯಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ರಾಷ್ಟ್ರೀಯ ಲೀಗ್ ಫಾರ್ ಡೆಮಾಕ್ರಾಟಿಕ್ ಪಕ್ಷವು ವಿಜಯ ಸಾಧಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.