ಶನಿವಾರ, ಜುಲೈ 2, 2022
25 °C

ಚೀನಾದಲ್ಲಿ ವಿಮಾನ ಪತನ; ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾದಲ್ಲಿ ಸೋಮವಾರ ವಿಮಾನ ಪತನಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಹಾಗೂ ದುಃಖ ವ್ಯಕ್ತಪಡಿಸಿದ್ದಾರೆ.

132 ಮಂದಿಯಿದ್ದ ಚೀನಾದ ಪ್ರಯಾಣಿಕ ವಿಮಾನ ದಕ್ಷಿಣ ಚೀನಾದ ಪರ್ವತ ಪ್ರದೇಶದಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದವರು ಯಾರೂ ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: 

ಚೀನಾ ಈಸ್ಟರ್ನ್‌ ಏರ್‌ಲೈನ್ಸ್‌ನ ಬೋಯಿಂಗ್‌ 737–800 ವಿಮಾನವು ಕುನ್‌ಮಿಂಗ್‌ನಿಂದ ಗುವಾಂಗ್‌ಝೌಗೆ ಸಂಚರಿಸುತ್ತಿತ್ತು. ವುಝೌ ನಗರದ ಸಮೀಪ ವಿಮಾನ ಪತನಗೊಂಡಿದೆ. ವಿಮಾನ ಬಿದ್ದ ಸ್ಥಳದಲ್ಲಿ ಭಾರಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದೆ.

ವಿಮಾನ ಪತನ ಹಿಂದಿನ ಕಾರಣ ತಕ್ಷಣಕ್ಕೆ ತಿಳಿದು ಬಂದಿಲ್ಲ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು