ಬುಧವಾರ, ಸೆಪ್ಟೆಂಬರ್ 29, 2021
20 °C
ವಿಶ್ವಸಂಸ್ಥೆಯ ಅಧಿವೇಶನದಲ್ಲಿ 100 ಕ್ಕೂ ಹೆಚ್ಚು ದೇಶಗಳ ನಾಯಕರು ಖುದ್ದು ಹಾಜರು ಸಾಧ್ಯತೆ

ಸೆ.25: ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಎಪಿ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಮುಂದಿನವಾರ ನಡೆಯಲಿರುವ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಭಾರತ, ಅಮೆರಿಕ, ಬ್ರೆಜಿಲ್‌ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ನಾಯಕರು ಭೌತಿಕವಾಗಿ ಪಾಲ್ಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ.25ರಂದು ಭಾಷಣ ಮಾಡಲಿದ್ದಾರೆ.

ಕೋವಿಡ್‌ ಪಿಡುಗಿನ ಕಾರಣಕ್ಕೆ ಕಳೆದ ವರ್ಷ ಈ ಅಧಿವೇಶನ ವರ್ಚುವಲ್‌ ರೂಪದಲ್ಲಿ ನಡೆದಿತ್ತು.

ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 193 ಸದಸ್ಯರಾಷ್ಟ್ರಗಳ ಈ ವಾರ್ಷಿಕ ಮಹಾ ಅಧಿವೇಶನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಜೋರ್ಡಾನ್‌ನ ರಾಜಾ ಅಬ್ದುಲ್ಲಾ, ಬ್ರೆಜಿಲ್‌, ವೆನಿಜುಯೆಲಾ ಸಹಿತ ಹಲವು ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

ಸೆ.24ರಂದು ವಾಷಿಂಗ್ಟನ್‌ನಲ್ಲಿ ‘ಕ್ವಾಡ್’ ಶೃಂಗಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಅದರಲ್ಲಿ ಪಾಲ್ಗೊಳ್ಳುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು