ಸೋಮವಾರ, ಡಿಸೆಂಬರ್ 5, 2022
21 °C

ಉಕ್ರೇನ್ ಬಿಕ್ಕಟ್ಟು: ಕದನ ವಿರಾಮ ಕೈಗೊಂಡು ರಾಜತಾಂತ್ರಿಕತೆ ಹಾದಿಗೆ ಮರಳಿ –ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಲಿ: ಉಕ್ರೇನ್‌ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ‘ಕದನ ವಿರಾಮ ಮತ್ತು ರಾಜತಾಂತ್ರಿಕತೆ’ ಹಾದಿಗೆ ಮರಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದರು.

ಇದೇ ವೇಳೆ, ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಮತ್ತು ಅನಿಲ ಆಮದು ಮಾಡುತ್ತಿರುವ ಬಗ್ಗೆ ಪಶ್ಚಿಮದ ದೇಶಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆಯೇ ಇಂಧನ ವಿತರಣೆಯ ಮೇಲಿನ ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.

 ಜಿ–20 ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಹವಾಮಾನ ಬದಲಾವಣೆ, ಕೋವಿಡ್‌ ಸಾಂಕ್ರಾಮಿಕ, ಉಕ್ರೇನ್‌ನಲ್ಲಿನ ಬೆಳವಣಿಗೆ ಹಾಗೂ ಜಾಗತಿಕ ಸಮಸ್ಯೆಗಳು ಜಗತ್ತಿನ ಸರ್ವನಾಶಕ್ಕೆ ಕಾರಣವಾಗಿದ್ದು, ಜಾಗತಿಕ ಪೂರೈಕೆ ಸರಪಳಿಯ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಹೇಳಿದರು.

ಜಾಗತಿಕ ಬೆಳವಣಿಗೆಗೆ ಭಾರತದ ಇಂಧನ ಭದ್ರತೆ  ಅತಿ ಮುಖ್ಯ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು