‘ಬಾವಲಿಯಲ್ಲಿ ‘ನಿಯೊಕೋವ್’ ಕೊರೊನಾ ವೈರಸ್ ಪತ್ತೆ’
ಬೀಜಿಂಗ್: ಕೊರೊನಾ ವೈರಸ್ ಕುಟುಂಬಕ್ಕೆ ಸೇರಿದ ‘ನಿಯೊಕೋವ್’ ಎಂಬ ವೈರಸ್ಅನ್ನು ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ಪತ್ತೆ ಹಚ್ಚಿದ್ದಾಗಿ ಚೀನಾ ಸಂಶೋಧಕರು ಹೇಳಿದ್ದಾರೆ.
‘ಈ ವೈರಸ್ ರೂಪಾಂತರಗೊಂಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಅಪಾಯವೊಡ್ಡಲಿದೆ’ ಎಂದೂ ಅವರು ಎಚ್ಚರಿಸಿದ್ದಾರೆ.
‘ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್’ (ಎಂಇಆರ್‌ಎಸ್) ಎಂಬ ಉಸಿರಾಟ ತೊಂದರೆ ಕಾಯಿಲೆಗೆ ಕಾರಣವಾಗುವ ವೈರಸ್‌ಗೆ ಇರುವಂತಹ ಗುಣಲಕ್ಷಣಗಳನ್ನೇ ’ನಿಯೊಕೋವ್’ ವೈರಾಣು ಹೊಂದಿದೆ ಎಂದಿರುವ ಸಂಶೋಧಕರು, ಈ ವೈರಸ್ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.