ಮಂಗಳವಾರ, ಜೂನ್ 15, 2021
26 °C
ಗಡಿ ವಿವಾದದ ನಂತರ ಮೊದಲ ಬಾರಿಗೆ ಸಭೆ ಸೇರಿರುವ ಉಭಯ ರಾಷ್ಟ್ರಗಳು

ನೇಪಾಳ–ಭಾರತ ರಾಜತಾಂತ್ರಿಕರ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿ ಹಿಮಾಲಯ ತಪ್ಪಲಿನಲ್ಲಿ ಭಾರತದ ನೆರವಿನೊಂದಿಗೆ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ನೇಪಾಳ – ಭಾರತದ ನಡುವೆ ಉದ್ಭವಿಸಿದ್ದ ಗಡಿ ವಿವಾದ ಮತ್ತು ಹೊಸ ರಾಜಕೀಯ ನಕ್ಷೆ ವಿವಾದದ ನಂತರ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಶಂಕರ್ ದಾಸ್ ಬೈರಗಿ ಮತ್ತು ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ತಮ್ಮ ದೇಶದ ಪ್ರತಿನಿಧಿಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ನೇಪಾಳ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ದೂರವಾಣಿ ಮೂಲಕ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕರ ನಡುವೆ ಈ ಸಭೆ ನಡೆಯುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು