ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದ ಪ್ರಧಾನಿ ದೇವುಬಾ ಶುಕ್ರವಾರ ಭಾರತಕ್ಕೆ

Last Updated 31 ಮಾರ್ಚ್ 2022, 15:59 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಪ್ರಧಾನಿ ಶೇರ್ ಬಹಾದ್ದೂರ್ ದೇವುಬಾ ಅವರು ಶುಕ್ರವಾರ 50 ಮಂದಿ ಪ್ರತಿನಿಧಿಗಳ ನಿಯೋಗದ ಜತೆ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತ ಮತ್ತು ನೇಪಾಳದ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಂಡಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ವಿದೇಶಿ ಪ್ರಯಾಣ ಇದಾಗಿದೆ.

ಈ ಭೇಟಿ ಸಂದರ್ಭದಲ್ಲಿ ನಿಯೋಗವು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊಬಾಲ್ ಅವರನ್ನು ಭೇಟಿ ಮಾಡಲಿದೆ.ಈ ನಿಯೋಗದಲ್ಲಿ ವಿದೇಶಾಂಗ, ಜಲ ಸಂಪನ್ಮೂಲ, ಆರೋಗ್ಯ ಮತ್ತು ನಾಗರಿಕ, ಕೃಷಿ ಸೇರಿದಂತೆ ಇನ್ನಿತರ ಇಲಾಖೆಗಳ ಕಾರ್ಯದರ್ಶಿಗಳು ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT