ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 10ಕ್ಕೆ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ವಿಶ್ವಾಸ ಮತಯಾಚನೆ

Last Updated 3 ಮೇ 2021, 6:54 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿ ಅವರು ಮೇ 10 ರಂದು ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.

ಪ್ರಧಾನಿ ಒಲಿ ಅವರ ಶಿಫಾರಸಿನ ಮೇರೆಗೆ ಅಧ್ಯಕ್ಷೆ ಬಿಡಿಯಾ ದೇವಿ ಭಂಡಾರಿ ಅವರು ಮೇ 10 ರಂದು ಸಂಸತ್‌ ಅಧಿವೇಶನ ಕರೆದಿದ್ದಾರೆ.

‘ಮೇ 10 ರಂದು ಪ್ರಧಾನಿ ಒಲಿ ಅವರು ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ‘ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿ‌ವರಾದ ಲೀಲಾನಾಥ್ ಶ್ರೇಷ್ಠಾ ‘ಕಠ್ಮಂಡು ಪೋಸ್ಟ್‌’ಗೆ ತಿಳಿಸಿದ್ದಾರೆ.

ಸಂಸತ್ತಿನ ಕೆಳಮನೆಯಲ್ಲಿ 275 ಸದಸ್ಯರಿದ್ದಾರೆ. ನಾಲ್ವರು ಸದಸ್ಯರು ಅಮಾನತುಗೊಂಡಿದ್ದಾರೆ. ಈ ಕಾರಣದಿಂದ ಒಲಿ ಅವರಿಗೆ ವಿಶ್ವಾಸ ಮತದಲ್ಲಿ ಜಯಗಳಿಸಲು ಕನಿಷ್ಠ136 ಮತಗಳು ಬೇಕಾಗುತ್ತವೆ.

ಭಾನುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಒಲಿ ಅವರು, ‘ಸಂಸತ್ತಿನಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿ, ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪ್ರಜಾ ಪ್ರತಿನಿಧಿ ಸಭೆಯನ್ನು ವಿಸರ್ಜಿಸಲು ಪ್ರಧಾನ ಮಂತ್ರಿ ಕೈಗೊಂಡ ವಿವಾದಾತ್ಮಕ ಕ್ರಮದಿಂದಾಗಿ, ನೇಪಾಳದಲ್ಲಿ ಇಂಥದ್ದೊಂದು ರಾಜಕೀಯ ಬಿಕ್ಕಟ್ಟು ತಲೆದೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT