ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಅವರಿಂದ ವಿಶ್ವಾಸಮತ ಯಾಚನೆ

Last Updated 20 ಮಾರ್ಚ್ 2023, 3:21 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಮೈತ್ರಿ ಸರ್ಕಾರದ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಸೋಮವಾರ ವಿಶ್ವಾಸಮತ ಯಾಚಿಸಲಿದ್ದಾರೆ.

ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ವಿಶ್ವಾಸಮತ ಗೆಲ್ಲಲಿದ್ದಾರೆ ಎಂದು ಸರ್ಕಾರದ ವಕ್ತಾರೆ ರೇಖಾ ಶರ್ಮ ಕಠ್ಮಂಡು ಪೋಸ್ಟ್‌ ಪತ್ರಿಕೆಗೆ ತಿಳಿಸಿದ್ದಾರೆ.

ಪುಷ್ಪ ಕಮಲ್‌ ಅವರು ಏಳು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದರು. ಆದರೆ ನೇಪಾಳದ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿಯ ಗೊಂದಲದಿಂದಾಗಿ ಮೂರು ಮಿತ್ರಪಕ್ಷಗಳಾದ ಸಿಪಿಎನ್‌–ಯುಎಂಎಲ್‌, ಆರ್‌ಪಿಪಿ ಹಾಗೂ ಆರ್‌ಎಸ್‌ಪಿ ಪಕ್ಷಗಳು ಸರ್ಕಾರದಿಂದ ಹೊರನಡೆದಿದೆ. ಈ ನಡುವೆ ಆರ್‌ಎಸ್‌ಪಿ ಪಕ್ಷ ಸರ್ಕಾರಕ್ಕೆ ಸರ್ಕಾರಕ್ಕೆ ಬಾಹ್ಯಬೆಂಬಲ ನೀಡುವುದಾಗಿ ಹೇಳಿದೆ.

ನೇಪಾಳಿ ಕಾಂಗ್ರೆಸ್‌ ಸೇರಿ ಇತರೆ ಇತರ ಆರು ಪಕ್ಷಗಳು ಸಹ ಪ್ರಧಾನಿ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರಿಗೆ ಬೆಂಬಲ ಘೋಷಣೆ ಮಾಡಿವೆ. ಈ ಹಿನ್ನೆಯಲ್ಲಿ ಪ್ರಚಂಡ ಅವರು ಸುಲಭವಾಗಿ ವಿಶ್ವಾಸಮತ ಗೆಲ್ಲಲಿದ್ದಾರೆ.

ವಿಶ್ವಾಸಮತ ಗೆದ್ದ ಬಳಿಕ ಖಾಲಿ ಉಳಿದಿರುವ 16 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ಇತ್ತೀಚೆಗೆ ನಡೆದ ನೇಪಾಳ ಅಧ್ಯಕ್ಷೀಯ ಚುನಾವಣೆಯಲ್ಲಿ 78 ವರ್ಷದ ರಾಂ ಚಂದ್ರ ಪೌಡೆಲ್ ಆಯ್ಕೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT