ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಿಂದ ನೇಪಾಳಿಗರ ತೆರವು: ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದೇವುಬಾ

Last Updated 12 ಮಾರ್ಚ್ 2022, 14:33 IST
ಅಕ್ಷರ ಗಾತ್ರ

ಕಠ್ಮಂಡು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ನಾಲ್ವರು ನೇಪಾಳ ಪ್ರಜೆಗಳನ್ನು ತೆರವುಗೊಳಿಸಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಶನಿವಾರ ಧನ್ಯವಾದ ಸಲ್ಲಿಸಿದ್ದಾರೆ.

ಫೆಬ್ರುವರಿ 24 ರಂದು ರಷ್ಯಾ ಉಕ್ರೇನ್‌ ಮೇಲೆ ದಾಳಿ ಪ್ರಾರಂಭಿಸಿದ ನಂತರ ಅಲ್ಲಿ ಸಿಲುಕಿದ್ದ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಭಾರತ ಸರ್ಕಾರ ಆರಂಭಿಸಿದ್ದ ‘ಆಪರೇಷನ್‌ ಗಂಗಾ’ ಹೆಸರಿನ ಕಾರ್ಯಾಚರಣೆ ಭಾಗವಾಗಿ ಭಾರತೀಯರ ಜೊತೆ ನೇಪಾಳ ವಿದ್ಯಾರ್ಥಿಗಳನ್ನೂ ತೆರವುಗೊಳಿಸಲಾಗಿತ್ತು.

‘ಉಕ್ರೇನ್‌ನಿಂದ ಭಾರತದ ಮೂಲಕ ಈಗಷ್ಟೇ ನಾಲ್ವರು ನೇಪಾಳ ಪ್ರಜೆಗಳು ಇಲ್ಲಿಗೆ ತಲುಪಿದ್ದಾರೆ. ಆಪರೇಷನ್‌ ಗಂಗಾ ಮೂಲಕ ನಮ್ಮ ದೇಶದ ನಾಗರಿಕರನ್ನು ಇಲ್ಲಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ದೇವುಬಾ ಶನಿವಾರ ಟ್ವೀಟ್‌ವೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT