ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ನವೆಂಬರ್ 20ಕ್ಕೆ ಸಾರ್ವತ್ರಿಕ ಚುನಾವಣೆ

Last Updated 4 ಆಗಸ್ಟ್ 2022, 13:16 IST
ಅಕ್ಷರ ಗಾತ್ರ

ಕಠ್ಮಂಡು: ನವೆಂಬರ್ 20 ರಂದು ನೆರೆಯ ನೇಪಾಳದ ಸಂಸತ್ತಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರಧಾನಿ ಶೇರ್ ಬಹದ್ದೂರ್ ದೇವುಬಾನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಸತ್ತಿನ ಪ್ರಜಾಪ್ರತಿನಿಧಿ ಸಭೆ ಮತ್ತು ಪ್ರಾಂತೀಯ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನೇಪಾಳದ ಪ್ರಜಾಪ್ರತಿನಿಧಿ ಸಭೆಯಲ್ಲಿ ಒಟ್ಟು 275 ಸದಸ್ಯ ಬಲವಿದ್ದು, ಇದರಲ್ಲಿ 165 ಮಂದಿ ಜನರಿಂದ ನೇರವಾಗಿ ಆಯ್ಕೆಯಾಗುತ್ತಾರೆ.

ಬೆಳಿಗ್ಗೆ ನಡೆದ ಆಡಳಿತಾರೂಢ ಮಿತ್ರಗಳ ಸಭೆಯಲ್ಲೂ ಚುನಾವಣೆ ನಡೆಸಲು ಒಮ್ಮತ ಮೂಡಿತ್ತು.

ಪ್ರಮುಖ ಪ್ರತಿಪಕ್ಷ ನಾಯಕ ಮತ್ತು ನೇಪಾಳದ ಕಮ್ಯುನಿಸ್ಟ್ ಪಕ್ಷದ ಅಧ್ಯಕ್ಷ ಕೆ.ಪಿ. ಶರ್ಮಾ ಒಲಿ ಸಹ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

‘ಚುನಾವಣೆ ನಡೆಸುವ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಇದು ಸ್ವಾಭಾವಿಕವೂ ಹೌದು’ ಎಂದು ಅವರು ಹೇಳಿದ್ದಾರೆ.

2017ರಲ್ಲಿ ಸಂಸತ್ತಿನ ಕೆಳಮನೆ ಮತ್ತು ದೇಶದ 7 ಪ್ರಾಂತ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯನ್ನು ನವೆಂಬರ್ 26 ಮತ್ತು ಡಿಸೆಂಬರ್ 7ರಂದು ಎರಡು ಹಂತಗಳಲ್ಲಿ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT