ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ರಚನೆಗೆ ನೇಪಾಳಿ ಕಾಂಗ್ರೆಸ್‌ ನಿರ್ಧಾರ

ಪ್ರಧಾನಿ ಒಲಿ ರಾಜೀನಾಮೆ ನೀಡದಿದ್ದರೆ ಅವಿಶ್ವಾಸ ನಿರ್ಣಯ ಮಂಡನೆ
Last Updated 4 ಏಪ್ರಿಲ್ 2021, 15:47 IST
ಅಕ್ಷರ ಗಾತ್ರ

ಕಠ್ಮಂಡು: ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಸಿಪಿಎನ್‌– ಮಾವೋವಾದಿ ಕೇಂದ್ರ ಮತ್ತು ಇತರ ಪಕ್ಷಗಳ ಬೆಂಬಲಗಳೊಂದಿಗೆ ಸರ್ಕಾರ ರಚಿಸುವುದಾಗಿ ನೇಪಾಳದ ಪ್ರಮುಖ ವಿರೋಧ ಪಕ್ಷ ನೇಪಾಳಿ ಕಾಂಗ್ರೆಸ್‌ ತಿಳಿಸಿದೆ.

ತನ್ನ ನೇತೃತ್ವದಲ್ಲಿ ಹೊಸ ಸರ್ಕಾರ ರಚಿಸುವ ಕ್ರಮಗಳನ್ನು ಕೈಗೊಳ್ಳಲು ನೇಪಾಳ ಕಾಂಗ್ರೆಸ್‌ನ (ಎನ್‌ಸಿ) ಕೇಂದ್ರ ಕಾರ್ಯಕಾರಿ ಸಮಿತಿ ಶನಿವಾರ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಕಾಶ್ ಮನ್ ಸಿಂಗ್ ಹೇಳಿದ್ದಾರೆ.

‘ಅಧಿಕಾರದಿಂದ ಕೆಳಗಿಳಿದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಕೋರಲಾಗುವುದು. ಪ್ರಧಾನಿ ಹುದ್ದೆಗೆ ಅವರು ರಾಜೀನಾಮೆ ನೀಡದಿದ್ದರೆ, ಜನ ಪ್ರತಿನಿಧಿಗಳ ಸಭೆಯಲ್ಲಿ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಲಾಗುವುದು. ಈ ಹಿಂದಿನ ಪ್ರಜಾಪ್ರಭುತ್ವದ ಸಾಧನೆಗಳನ್ನು ರಕ್ಷಿಸುವ ಉದ್ದೇಶದಿಂದ ನೇಪಾಳ ಕಾಂಗ್ರೆಸ್‌ ನಾಯಕತ್ವದಲ್ಲಿ ಹೊಸ ಸರ್ಕಾರ ರಚಿಸುವ ಪ್ರಯತ್ನ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT