ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಲ್ಸ್ ಶೋಭರಾಜ್‌ ಬಿಡುಗಡೆಗೆ ಅರ್ಜಿ: ಸರ್ಕಾರಕ್ಕೆ ನೋಟಿಸ್

Last Updated 23 ಡಿಸೆಂಬರ್ 2021, 15:44 IST
ಅಕ್ಷರ ಗಾತ್ರ

ಕಠ್ಮಂಡು: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ಅವರಿಗೆ 77 ವರ್ಷ ಆಗಿರುವುದರಿಂದ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮೂರು ದಿನಗಳಲ್ಲಿ ಉತ್ತರಿಸುವಂತೆ ನೇಪಾಳದ ಸುಪ್ರೀಂಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಶೋಭರಾಜ್‌ ಅವರು 18 ವರ್ಷಗಳಿಂದ ಜೈಲಿನಲ್ಲಿದ್ದಾರೆ. ವಯಸ್ಸಾಗಿರುವ ಕಾರಣ ಅವರನ್ನು ಬಿಡುಗಡೆ ಮಾಡಬೇಕು ಎಂಬುದು ಅರ್ಜಿದಾರರ ಬೇಡಿಕೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿಲ್‌ಕುಮಾರ್‌ ಸಿನ್ಹಾ ನೇತೃತ್ವದ ಪೀಠ, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT