ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ ಪ್ರಧಾನಿ ನೇತನ್ಯಾಹುಗೂ ತಟ್ಟಿದ ಪ್ರತಿಭಟನೆ ಬಿಸಿ

Last Updated 9 ಮಾರ್ಚ್ 2023, 19:46 IST
ಅಕ್ಷರ ಗಾತ್ರ

ಟೆಲ್ ಅವಿವ್‌: ಜನರ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು ಅವರನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಯುಮಾರ್ಗದಲ್ಲಿ ಕರೆದೊಯ್ಯಲಾಯಿತು. ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶದ ಬಿಸಿ ಗುರುವಾರ ಪ್ರಧಾನಿಗೂ ತಟ್ಟಿತು.

ವಿದೇಶ ಪ್ರವಾಸಕ್ಕೆ ತೆರಳಲು ಅವರು ಇಲ್ಲಿನ ಅಂತರರಾಷ್ಟ್ರೀಯ ವಿಮಾನಿಲ್ದಾಣಕ್ಕೆ ತಲುಪಬೇಕಾಗಿತ್ತು. ಆದರೆ, ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರಿಂದಾಗಿ ರಸ್ತೆ ಮಾರ್ಗದಲ್ಲಿ ತೆರಳಲು ಆಗಲಿಲ್ಲ. ಪ್ರತಿಭಟನೆ ಭಾಗವಾಗಿ ಜನರು ವಿಮಾನನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿದ್ದರು.

ನ್ಯಾಯಾಂಗದ ಅಧಿಕಾರವನ್ನು ಕುಗ್ಗಿಸುವ ಸರ್ಕಾರದ ನಿರ್ಧಾರ ಖಂಡಿಸಿ ಇಸ್ರೇಲ್‌ನಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಎರಡು ತಿಂಗಳಿನಿಂದಲೂ ಪ್ರತಿಭಟನೆ ನಡೆಯುತ್ತಿದೆ. ನೇತನ್ಯಾಹು ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT