ಗುರುವಾರ , ಅಕ್ಟೋಬರ್ 6, 2022
26 °C

ಇಸ್ರೇಲ್‌: ಅಧಿಕೃತ ನಿವಾಸ ತೆರವುಗೊಳಿಸಿದ ಮಾಜಿ ಪ್ರಧಾನಿ ನೆತನ್ಯಾಹು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಜೆರುಸಲೇಂ: ಇಸ್ರೇಲ್‌ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಅಧಿಕೃತ ನಿವಾಸವನ್ನು ಭಾನುವಾರ ತೆರವುಗೊಳಿಸಿದರು.

ಇಸ್ರೇಲ್‌ನ ನೂತನ ಪ್ರಧಾನಿಯಾಗಿ ನಫ್ತಾಲಿ ಬೆನೆಟ್‌ ಅವರು ಅಧಿಕಾರ ಸ್ವೀಕರಿಸಿದ ಒಂದು ತಿಂಗಳ ಬಳಿಕ ಬೆಂಜಮಿನ್‌ ಅವರು ಜೆರುಸಲೇಂನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ತೆರವುಗೊಳಿಸಿದ್ದಾರೆ.

‘ಶನಿವಾರ ತಡರಾತ್ರಿ ನೆತನ್ಯಾಹು ಅವರ ಕುಟುಂಬವು ಬಾಲ್ಫೋರ್ ಸ್ಟ್ರೀಟ್‌ನಲ್ಲಿರುವ ನಿವಾಸದಿಂದ ಹೊರ ನಡೆದಿದ್ದಾರೆ’ ಎಂದು ನೆತನ್ಯಾಹು ವಕ್ತಾರರು ವರದಿಗಾರರಿಗೆ ತಿಳಿಸಿದರು. ಅಧಿಕಾರ ಕಳೆದುಕೊಂಡ ಬಳಿಕ ಇಷ್ಟು ಸುದೀರ್ಘ ಅವಧಿಗೆ ಅಧಿಕೃತ ನಿವಾಸದಲ್ಲೇ ಉಳಿದ ಮಾಜಿ ಪ್ರಧಾನಿ ಎಂಬ ಕುಖ್ಯಾತಿಗೆ ನೆತನ್ಯಾಹು ಪಾತ್ರರಾಗಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು