ಭಾನುವಾರ, ಜೂನ್ 20, 2021
26 °C

ಅಗತ್ಯ ಇರುವವರೆಗೂ ದಾಳಿ ಮುಂದುವರೆಯಲಿದೆ: ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಟೆಲ್ ಅವಿವ್: ಅಗತ್ಯ ಇರುವವರೆಗೂ ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ನ ದಾಳಿ ಮುಂದುವರೆಯಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಹಮಸ್‌ನ ಬಂಡುಕೋರ ನಾಯಕರು ಕಾರಣವಾಗಿದ್ದಾರೆ. ರಾಕೆಟ್‌ ದಾಳಿಯಲ್ಲಿ ನಾಗರಿಕರ ಸಾವುನೋವುಗಳನ್ನು ತಪ್ಪಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ' ಎಂದು ತಿಳಿಸಿದ್ದಾರೆ.

'ಪ್ರಸ್ತುತ ಏರ್ಪಟ್ಟಿರುವ ಸಂಘರ್ಷಕ್ಕೆ ನಾವು ಹೊಣೆಗಾರರಲ್ಲ. ಈ ಬಗ್ಗೆ ನಮಗೆ ಯಾವುದೇ ಅಪರಾಧಿ ಭಾವನೆಯೂ ಇಲ್ಲ. ನಮ್ಮ ಮೇಲೆ ಆಕ್ರಮಣ ಮಾಡಿದವರಿಗೆ ಅಪರಾಧಿ ಭಾವನೆ ಇರಬೇಕು' ನೆತನ್ಯಾಹು ಹೇಳಿದ್ದಾರೆ.

'ನಾವು ಇನ್ನೂ ಈ ಕಾರ್ಯಾಚರಣೆಯ ಮಧ್ಯದಲ್ಲಿದ್ದೇವೆ. ಅದು ಇನ್ನೂ ಮುಕ್ತಾಯವಾಗಿಲ್ಲ. ಅಗತ್ಯ ಇರುವವರೆಗೂ ಕಾರ್ಯಾಚರಣೆಯನ್ನು ನಡೆಸಲಿದ್ದೇವೆ' ಎಂದು ಇಸ್ರೇಲ್‌ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

'ನಾವು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದೇವೆ. ಹಮಸ್‌ ಬಂಡುಕೋರರು ನಾಗರಿಕರ ಹಿಂದೆ ಅಡಗಿ ನಾಗರಿಕರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ನಾವು ನಾಗರಿಕರ ಪ್ರಾಣ ಹಾನಿ ಆಗದಂತೆ ಎಚ್ಚರ ವಹಿಸಿದ್ದೇವೆ.' ನೆತನ್ಯಾಹು ತಿಳಿಸಿದ್ದಾರೆ.

ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು, ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಇದು ಈಗ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷಕ್ಕೆ ತಿರುಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು