ಶನಿವಾರ, ಮೇ 28, 2022
22 °C
ಶ್ರೀಲಂಕಾ: ವಿರೋಧ ಪಕ್ಷಗಳಿಗೆ ಪ್ರಧಾನಿ ವಿಕ್ರಮಸಿಂಘೆ ಮನವಿ

ದೇಶದ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಸಹಕರಿಸಿ: ಪ್ರಧಾನಿ ವಿಕ್ರಮಸಿಂಘೆ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ದೇಶದ ಆರ್ಥಿಕತೆಯನ್ನು ಸರಿದಾರಿಗೆ ತರುವ ಸಲುವಾಗಿ ರಾಜಕಾರಣವನ್ನು ಬದಿಗಿಟ್ಟು ಸರ್ವಪಕ್ಷಗಳನ್ನು ಒಳಗೊಂಡ ಸರ್ಕಾರ ರಚನೆಗೆ ಕೈಜೋಡಿಸುವಂತೆ ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ವಿರೋಧ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದಾರೆ.

ನೂತನ ಪ್ರಧಾನಿ ಆಯ್ಕೆಯು ಅಸಾಂವಿಧಾನಿಕ ಮತ್ತು ಪ್ರಧಾನಿ ವಿಕ್ರಮಸಿಂಘೆ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ವಿರೋಧ ಪಕ್ಷಗಳು ಘೋಷಿಸಿದ ಬೆನ್ನಲ್ಲೇ, ರಾನಿಲ್ ವಿಕ್ರಮಸಿಂಘೆ ಅವರಿಂದ ಈ ಹೇಳಿಕೆ ಹೊರಬಿದ್ದಿದೆ ಎಂದು ಮಾಧ್ಯಮಗಳು ಶನಿವಾರ ವರದಿ ಮಾಡಿವೆ.

ಈ ಸಂಬಂಧ, ಪ್ರಮುಖ ವಿರೋಧ ಪಕ್ಷ ಎಸ್‌ಜೆಬಿ ನಾಯಕ ಸಜಿತ್ ಪ್ರೇಮದಾಸ ಅವರಿಗೆ ವಿಕ್ರಮಸಿಂಘೆ ಪತ್ರ ಬರೆದಿದ್ದಾರೆ ಎಂದು ಆನ್‌ಲೈನ್‌ ಪತ್ರಿಕೆ ಡೈಲಿ ಮಿರರ್ ವರದಿ ಮಾಡಿದೆ.

'ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದ ಜನತೆ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಮತ್ತು ವಿದೇಶದ ನೆರವು ಪಡೆಯುವ ಮೂಲಕ ದೇಶದಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸ್ಥಿರತೆಯನ್ನು ಕಾಪಾಡಲು ಎಸ್‌ಜೆಬಿ ನೆರವು ನೀಡಬೇಕು. ರಾಜಕೀಯವನ್ನು ಬದಿಗಿಟ್ಟು ಸರ್ವಪಕ್ಷಗಳ ಸರ್ಕಾರ ರಚನೆಗೆ ನೆರವಾಗಬೇಕು' ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. 

1948ರಲ್ಲಿ ಸ್ವತಂತ್ರಗೊಂಡ ಶ್ರೀಲಂಕಾವು ಇದೇ ಮೊಟ್ಟ ಮೊದಲ ಬಾರಿಗೆ ವಿದೇಶಿ ವಿನಿಮಯದ ಕೊರತೆಯಿಂದಾಗಿ ಹಿಂದೆಂದೂ ಕಂಡು ಕೇಳರಿಯದಷ್ಟು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು