ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಅಮೆರಿಕದಲ್ಲಿ ಹೊಸ ಪ್ರಕರಣಗಳ ಪ್ರಮಾಣ ಶೇ 21ರಷ್ಟು ಇಳಿಕೆ

Last Updated 26 ಆಗಸ್ಟ್ 2020, 9:39 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜನರು ಮುಖಗವಸು ಧರಿಸುತ್ತಿರುವುದು ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದಲ್ಲಿ ಪ್ರತಿನಿತ್ಯ ಸರಾಸರಿ 1,000 ಮಂದಿ ಕೋವಿಡ್‌ನಿಂದ ಸಾವಿಗೀಡಾಗುತ್ತಿದ್ದಾರೆ. ದೇಶದಾದ್ಯಂತ ಪ್ರತಿ ದಿನ 43,000 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಆಗಸ್ಟ್ ತಿಂಗಳ ಆರಂಭದಲ್ಲಿ ಹೋಲಿಸಿದರೆ ಈಗ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇಕಡ 21 ರಷ್ಟು ಇಳಿಕೆಯಾಗಿದೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯ ಸಂಗ್ರಹಿಸಿದ ದತ್ತಾಂಶವು ಹೇಳಿದೆ.

ಆದರೂ, ಇತರ ದೇಶಗಳಿಗೆ ಹೋಲಿಸಿದರೆ ಇನ್ನೂ ಅಮೆರಿಕದಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಅಮೆರಿಕ ಹೊರತುಪಡಿಸಿದರೆ, ಭಾರತ ಮತ್ತು ಬ್ರೆಜಿಲ್‌ನಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

‘ಅಮೆರಿಕದ ಜನರಲ್ಲಿ ವೈರಸ್‌ ಹೇಗೆ ಹರಡುತ್ತದೆ ಎಂಬುದರ ಬಗ್ಗೆ ಅರಿವು ಮೂಡಿದೆ. ಹಾಗಾಗಿ ಅವರು ಹೆಚ್ಚಿನ ಸಮಯ ಮುಖಗವಸು ಧರಿಸಲು ಆರಂಭಿಸಿದ್ದಾರೆ. ಅವರ ರೋಗನಿರೋಧಕ ಶಕ್ತಿಯೂ ಹೆಚ್ಚಾಗಿರುವ ಸಾಧ್ಯತೆ ಇದೆ. ಬಹುಶಃ ಈ ಎಲ್ಲಾ ಅಂಶಗಳು ಅಮೆರಿಕದಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದೆ’ ಎಂದು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಸಾಂಕ್ರಾಮಿಕ-ರೋಗಗಳ ತಜ್ಞೆ ಡಾ. ಮೋನಿಕಾ ಗಾಂಧಿ ಅವರು ತಿಳಿಸಿದರು.

ಆದರೆ, ಪರೀಕ್ಷೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಕೆಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಹಾಟ್‌ಸ್ಪಾಟ್‌ಗಳು ಎಂದು ಗುರುತಿಸಲಾದ ಪ್ರದೇಶಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳು ನಡೆಯುತ್ತಿಲ್ಲ’ ಎಂದು ರಾಕ್‌ಫೆಲ್ಲರ್‌ ಫೌಂಡೇಷನ್‌ನ ಡಾ. ಜೋನಾಥನ್‌ ಕ್ವಿಕ್‌ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT