ನ್ಯೂಯಾರ್ಕ್: ಕೊರೊನಾ ಸೋಂಕು ಪ್ರಸರಣವನ್ನು ತಡೆಯುವ ನಿಟ್ಟಿನಲ್ಲಿ ನ್ಯೂಯಾರ್ಕ್ ನಗರದ ಶಾಲೆಗಳನ್ನು ಮುಚ್ಚಲಾಗುತ್ತಿದೆ.

‘ನಗರದ 1,800 ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಗುರುವಾರದಿಂದ ಆನ್‌ಲೈನ್ ತರಗತಿಗಳು ಆರಂಭವಾಗಲಿವೆ’ ಎಂದು ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೊ ತಿಳಿಸಿದ್ದಾರೆ.

’ನಗರದಲ್ಲಿ ಸತತ ಏಳು ದಿನಗಳ ಕಾಲ ಶೇಕಡ 3 ರಷ್ಟು ಪ್ರಕರಣಗಳು ದೃಢಪಟ್ಟರೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಈ ಹಿಂದೆಯೇ ನಿರ್ಧರಿಸಲಾಗಿತ್ತು. ಅದರಂತೆಯೇ ನಗರದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಜತೆಗೆ, ನಗರದಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆಯೂ ಇದೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಎಂದು ಬ್ಲಾಸಿಯೊ ಅವರು ಪೋಷಕರಿಗೆ ತಿಳಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ನ್ಯೂಯಾರ್ಕ್ ನಗರದ ಶಾಲೆಗಳ 10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳಲಾಗುವುದು. ಅಕ್ಟೋಬರ್ ತಿಂಗಳಲ್ಲಿ ಶೇಕಡ 25 ರಷ್ಟು ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಿದ್ದಾರೆ. ಶಾಲೆಗಳನ್ನು ಆರಂಭಿಸಿದ ಬಳಿಕ ನಿರೀಕ್ಷೆಗಿಂತ ಕಡಿಮೆ ಮಕ್ಕಳು ಶಾಲೆಗೆ ಹಾಜರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ಸೆಪ್ಟೆಂಬರ್ 29ರಿಂದ ಪ್ರಾಥಮಿಕ ಶಾಲೆ ಮತ್ತು ಅಕ್ಟೋಬರ್ 1ರಿಂದ ಪ್ರೌಢಶಾಲೆಗಳು ಆರಂಭಗೊಂಡವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.