ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇವಲ 1 ಕೋವಿಡ್ ಪ್ರಕರಣ, 3 ದಿನ ನ್ಯೂಜಿಲೆಂಡ್ ಬಂದ್

Last Updated 17 ಆಗಸ್ಟ್ 2021, 11:29 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್: ಸಮುದಾಯದಲ್ಲಿ ಕೇವಲ ಒಂದೇ ಒಂದು ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗುತ್ತಿದ್ದಂತೆ ನ್ಯೂಜಿಲೆಂಡ್ ಸರ್ಕಾರ ಮಂಗಳವಾರ ಇಡೀ ರಾಷ್ಟ್ರದಲ್ಲಿ ಮೂರು ದಿನಗಳ ಲಾಕ್‌ಡೌನ್‌ ಘೋಷಿಸಿದೆ.

‘ನಮಗೆ ಎಚ್ಚೆತ್ತುಕೊಳ್ಳಲು ಒಮ್ಮೆ ಮಾತ್ರ ಅವಕಾಶ ಸಿಗುತ್ತದೆ. ಅದರಲ್ಲಿ ವಿಫಲವಾದರೆ ಸಾಂಕ್ರಾಮಿಕ ರೋಗ ಯಾವ ರೀತಿ ಉತ್ತುಂಗಕ್ಕೆ ಹೋಗುತ್ತದೆ ಎನ್ನುವುದನ್ನು ಬೇರೆ ರಾಷ್ಟ್ರಗಳಲ್ಲಿ ನಾವು ಕಂಡಿದ್ದೇವೆ’ ಎಂದು ಪ್ರಧಾನಿ ಜಸಿಂದಾ ಆರ್ಡೆರ್ನ್‌ ಹೇಳಿದ್ದಾರೆ.

ಕೊರೊನಾ ಮೊದಲ ಅಲೆಯಲ್ಲಿ ಸೋಂಕನ್ನು ಮತ್ತು ಫೆಬ್ರುವರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಎರಡನೇ ಅಲೆಯನ್ನು ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿತ್ತು. ಆದರೆ, ಡೆಲ್ಟಾ ರೂಪಾಂತರದ ಸಾಂಕ್ರಾಮಿಕವನ್ನು ತಡೆಗಟ್ಟಲು ಹಿಂದಿನ ಕ್ರಮಗಳಿಗಿಂತ ಹೆಚ್ಚಿನ ಕಠಿಣ ಕ್ರಮದ ಅಗತ್ಯವಿರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT