ಸೋಮವಾರ, ಸೆಪ್ಟೆಂಬರ್ 27, 2021
22 °C

ಸ್ಪೆಲಿಂಗ್‌ ಬೀ ಸ್ಪರ್ಧೆಯ ಫಿನಾಲೆಯಲ್ಲಿ 9 ಮಂದಿ ಭಾರತೀಯ ಅಮೆರಿಕನ್ನರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: 2021ನೇ ಸಾಲಿನ ಪ್ರತಿಷ್ಠಿತ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯ ಅಂತಿಮ ಸುತ್ತಿಗೆ ತಲುಪಿದ 11 ಸ್ಪರ್ಧಿಗಳ ಪೈಕಿ 9 ಮಂದಿ ಭಾರತೀಯ ಅಮೆರಿಕನ್ನರು.

‘ಭಾರತ ಸಂಜಾತರಾದ 9 ಮಂದಿ ಸೇರಿದಂತೆ 11 ಸ್ಪರ್ಧಿಗಳು ಜುಲೈ 8ರಂದು ನಡೆಯಲಿರುವ ಸ್ಕ್ರಿಪ್ಸ್ ರಾಷ್ಟ್ರೀಯ ಸ್ಪೆಲ್ಲಿಂಗ್‌ ಬೀ ಸ್ಪರ್ಧೆಯ ಫಿನಾಲೆಯಲ್ಲಿ ಚಾಂಪಿಯನ್‌ ಟೈಟಲ್‌ಗೆ ಸೆಣಸಾಡಲಿದ್ದಾರೆ’ ಎಂದು ಸೋಮವಾರ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ಅಮೆರಿಕದ ಜನಸಂಖ್ಯೆಯಲ್ಲಿ ಭಾರತೀಯ ಅಮೆರಿಕನ್ನರು ಶೇಕಡ 1 ರಷ್ಟಿದ್ದಾರೆ. ಆದರೂ ಕಳೆದ 20 ವರ್ಷಗಳಿಂದ ಅಮೆರಿಕದ ಸ್ಪೆಲಿಂಗ್‌ ಬೀ ಸ್ಪರ್ಧೆಯಲ್ಲಿ ‍ಭಾರತೀಯ ಅಮೆರಿಕನ್ನರು ಪ್ರಾಬಲ್ಯ ಸಾಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು