ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಮೂಲದ ಕುರಿತಂತೆ ಯಾವುದೇ ಖಚಿತ ನಿರ್ಧಾರಕ್ಕೆ ಬಂದಿಲ್ಲ: ಶ್ವೇತಭವನ

Last Updated 28 ಫೆಬ್ರುವರಿ 2023, 3:56 IST
ಅಕ್ಷರ ಗಾತ್ರ

ವಾಷಿಂಗ್ಟನ್: ಕೋವಿಡ್–19 ಉಗಮದ ಕುರಿತಂತೆ ಯಾವುದೇ ಖಚಿತವಾದ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಶ್ವೇತಭವನ ಸೋಮವಾರ ತಿಳಿಸಿದೆ.

'ಗುಪ್ತಚರ ಸಮುದಾಯ ಮತ್ತು ಸರ್ಕಾರದ ಇತರ ಅಧಿಕಾರಿಗಳು ಈ ಬಗ್ಗೆ ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ. ಖಚಿತವಾದ ತೀರ್ಮಾನಕ್ಕೆ ಬರಲಾಗಿಲ್ಲ, ಆದ್ದರಿಂದ ಈ ಬಗ್ಗೆ ಹೇಳುವುದು ಕಷ್ಟ’ ಎಂದು ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ದೈನಂದಿನ ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೋವಿಡ್ ವೈರಾಣು ಲ್ಯಾಬ್ ಸೋರಿಕೆಯಿಂದ ಬಂದಿದೆ ಎಂದು ಅಮೆರಿಕದ ಇಂಧನ ಇಲಾಖೆಯ ಸಂಶೋಧನೆಗಳನ್ನು ಉಲ್ಲೇಖಿಸಿ ವಾರಾಂತ್ಯದಲ್ಲಿ ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಆದ ವರದಿ ಬಗ್ಗೆ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಅಧ್ಯಕ್ಷ ಜೋ ಬೈಡನ್ ಅಧಿಕಾರ ವಹಿಸಿಕೊಂಡಾಗಿನಿಂದ ಕೋವಿಡ್ ಮೂಲವನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಅವರು ಸಂಪೂರ್ಣ ಸರ್ಕಾರದ ಆಡಳಿತ ಯಂತ್ರವನ್ನು ಬಳಸಿಕೊಂಡಿದ್ದಾರೆ ಎಂದು ಕಿರ್ಬಿ ಹೇಳಿದರು.

‘ಕೋವಿಡ್ ವೈರಾಣು ಹೇಗೆ ಹರಡಿತು ಎಂಬುದರ ಕುರಿತು ಅಮೆರಿಕ ಸರ್ಕಾರವು ಒಂದು ನಿರ್ದಿಷ್ಟ ನಿರ್ಧಾರಕ್ಕೆ ಬಂದಿಲ್ಲ. ಗುಪ್ತಚರ ಅಧಿಕಾರಿಗಳು ಸಹ ಒಮ್ಮತಕ್ಕೆ ಬಂದಿಲ್ಲ’ ಎಂದು ಅವರು ತಿಳಿಸಿದರು.

‘ಭವಿಷ್ಯದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಕೋವಿಡ್ ಹೇಗೆ ಆರಂಭವಾಯಿತು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಬೈಡನ್ ನಂಬಿದ್ದಾರೆ. ಆ ನಿಟ್ಟಿನಲ್ಲಿ ತಮ್ಮ ಪ್ರಯತ್ನ ಮುಂದುವರಯಲಿದೆ’ ಎಂದು ಕಿರ್ಬಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT