ಈಗಿನ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ವ್ಯಾಪಾರವಿಲ್ಲ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಈಗಿನ ಪರಿಸ್ಥಿತಿಯಲ್ಲಿ ನೆರೆಯ ಭಾರತ ದೇಶದೊಂದಿಗೆ ಯಾವುದೇ ರೀತಿಯ ವ್ಯಾಪಾರ ವಹಿವಾಟು ನಡೆಸದಿರಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ.
ಇದಕ್ಕೂ ಮೊದಲು ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕು ಎಂಬ ಉನ್ನತಾಧಿಕಾರ ಸಮಿತಿಯೊಂದು ಮಾಡಿದ್ದ ಪ್ರಸ್ತಾವವನ್ನು ಪಾಕಿಸ್ತಾನ ಸಚಿವ ಸಂಪುಟ ತಿರಸ್ಕರಿಸಿತ್ತು.
ಶುಕ್ರವಾರ ನಡೆದ ಸಮಾಲೋಚನೆಯ ಬಳಿಕ ಪ್ರಧಾನಿ ಮಂತ್ರಿ ಕಚೇರಿಯು ಪರ್ಯಾಯವಾಗಿ ಇತರೆ ಅಗ್ಗದ ಮಾರ್ಗಗಳನ್ನು ಹುಡುಕಿಕೊಳ್ಳುವಂತೆ ವಾಣಿಜ್ಯ ಇಲಾಖೆಗೆ ಸೂಚನೆ ರವಾನಿಸಿದೆ.
ಡಾನ್ ಪ್ರತ್ರಿಕೆ ವರದಿಯಂತೆ ಆರ್ಥಿಕ ಹಾಗೂ ವಾಣಿಜ್ಯ ದೃಷ್ಟಿಕೋನದಿಂದ ಆರ್ಥಿಕ ಸಮನ್ವಯ ಸಮಿತಿಯು (ಇಸಿಸಿ) ಅನೇಕ ಪ್ರಸ್ತಾಪಗಳನ್ನು ಮುಂದಿರಿಸಿತ್ತು. ಇಸಿಸಿ ಪರಿಗಣಿಸಿದ ಬಳಿಕ ಅಂತಿಮ ಅನುಮೋದನೆಗಾಗಿ ಸಂಪುಟದ ಮುಂದಿಡಲಾಗಿತ್ತು.
ಇದನ್ನೂ ಓದಿ: ಭಾರತದಿಂದ ಹತ್ತಿ ಆಮದು ಇಲ್ಲ ಎಂದ ಇಮ್ರಾನ್ ಸರ್ಕಾರದ ಮೇಲೆ ಪಾಕ್ ಉದ್ಯಮ ಬೇಸರ
ಈಗಿನ ಪರಿಸ್ಥಿತಿಯಲ್ಲಿ ದೇಶದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತದಿಂದ ಹತ್ತಿ ಹಾಗೂ ಸಕ್ಕರೆಯನ್ನು ಆಮದು ಮಾಡಿಕೊಳ್ಳಲು ಇಸಿಸಿ ಸಲಹೆ ಮಾಡಿತ್ತು.
ಇದರೊಂದಿಗೆ ಶುಕ್ರವಾರ ಸಚಿವ ಸಂಪುಟದ ಉನ್ನತ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ವ್ಯಾಪಾರ ಮುಂದುವರಿಸಲು ಸಾಧ್ಯವಿಲ್ಲ ಎಂಬ ನಿರ್ಧಾರವನ್ನು ತಳೆದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.