ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೊರಿಯಾ: ಹೈಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

Last Updated 12 ಜನವರಿ 2022, 17:14 IST
ಅಕ್ಷರ ಗಾತ್ರ

ಸೋಲ್‌:ಉತ್ತರ ಕೊರಿಯಾ ನಡೆಸಿದ ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷೆಯಶಸ್ವಿಯಾಗಿದೆ ಎಂದು ಆ ದೇಶದ ಅಧ್ಯಕ್ಷಕಿಮ್‌ ಜಾಂಗ್‌ ಉನ್‌ ಹೇಳಿದ್ದಾರೆ.

ಉತ್ತರ ಕೊರಿಯಾ ತನ್ನ ಪೂರ್ವ ಸಮುದ್ರಕ್ಕೆ ಶಂಕಿತ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸುತ್ತಿರುವುದನ್ನು ಪತ್ತೆ ಹಚ್ಚಿರುವುದಾಗಿ ಅಮೆರಿಕ, ದಕ್ಷಿಣ ಕೊರಿಯಾ ಮತ್ತು ಜಪಾನ್‌ನ ಸೇನೆಯು ಮಂಗಳವಾರ ಅಷ್ಟೇ ಹೇಳಿತ್ತು. ಇದಾದ ಮರು ದಿನವೇ ಉತ್ತರ ಕೊರಿಯಾದ ಸರ್ಕಾರಿ ಮಾಧ್ಯಮ ಕ್ಷಿಪಣಿ ಪರೀಕ್ಷೆ ಕುರಿತು ವರದಿ ಮಾಡಿದೆ.

ಶಬ್ದಾತೀತ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದ್ದು, ಇದು ದೇಶದ ಪರಮಾಣು ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಉತ್ತರ ಕೊರಿಯಾ ತಿಳಿಸಿದೆ.ಕ್ಷಿಪಣಿ ಉಡಾವಣೆ ಕುರಿತ ಛಾಯಾಚಿತ್ರಗಳನ್ನು ಸುದ್ದಿಸಂಸ್ಥೆ ಬಿಡುಗಡೆ ಮಾಡಿದೆ. ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ಅವರು ಸಣ್ಣ ಕೊಠಡಿಯೊಂದರಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಕುಳಿತು ಕ್ಷಿಪಣಿ ಪರೀಕ್ಷೆಯನ್ನು ವೀಕ್ಷಿಸಿದರು ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT