ಶುಕ್ರವಾರ, ಮಾರ್ಚ್ 24, 2023
23 °C

ಯುದ್ಧ ವಿಮಾನ ಹಾರಿಸಿ, ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ: ದಕ್ಷಿಣ ಕೊರಿಯಾ

ಎಪಿ Updated:

ಅಕ್ಷರ ಗಾತ್ರ : | |

ಸೋಲ್‌: ತನ್ನ ಪೂರ್ವ ಕರಾವಳಿ ಪ್ರದೇಶದತ್ತ ಉತ್ತರ ಕೋರಿಯಾ ಖಂಡಾಂತರ ಕ್ಷಿಪಣಿ ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾ ಆರೋಪಿಸಿದೆ.

ಶುಕ್ರವಾರ ಬೆಳಗ್ಗೆಯೇ ದಾಳಿ ನಡೆದಿದೆ ಎಂದು ದಕ್ಷಿಣ ಕೊರಿಯಾದ ಸಿಬ್ಬಂದಿ ವಿಭಾಗದ ಜಂಟಿ ಮುಖ್ಯಸ್ಥ ತಿಳಿಸಿದ್ದಾರೆ. ಆದರೆ ಹೆಚ್ಚಿನ ಮಾಹಿತಿ ನೀಡಿಲ್ಲ.

ಉತ್ತರ ಕೊರಿಯಾ ಗುರುವಾರ ತಡರಾತ್ರಿ ಗಡಿ ಪ್ರದೇಶದಲ್ಲಿ ಯುದ್ಧ ವಿಮಾನಗಳ ಹಾರಾಟ ನಡೆಸಿತು. ಇದು ದಕ್ಷಿಣ ಕೊರಿಯಾವು ಫೈಟರ್‌ ಜೆಟ್‌ಗಳನ್ನು ಸಜ್ಜುಗೊಳಿಸಲು ಪ್ರೇರೇಪಿಸಿತು ಎಂದೂ ಅವರು ಹೇಳಿದ್ದಾರೆ.

ಎರಡೂ ರಾಷ್ಟ್ರಗಳ ಕಡೆಗಳಲ್ಲಿ ಸಾವು–ನೋವು ಸಂಭವಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.

ದೀರ್ಘ-ಶ್ರೇಣಿಯ ಕ್ರೂಸ್ ಕ್ಷಿಪಣಿ ಪರೀಕ್ಷೆ ನಡೆಸಿದ್ದಾಗಿ ಉತ್ತರ ಕೊರಿಯಾ ಗುರುವಾರ ಹೇಳಿಕೊಂಡಿತ್ತು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು