ಶುಕ್ರವಾರ, ಜನವರಿ 22, 2021
27 °C

ಕಿಮ್ ಜಾಂಗ್ ಉನ್ ಅನಾರೋಗ್ಯ ಊಹಾಪೋಹಕ್ಕೆ ತೆರೆ ಎಳೆದ ಉತ್ತರ ಕೊರಿಯಾ ಮಾಧ್ಯಮ

ಎಎಫ್‌ಪಿ Updated:

ಅಕ್ಷರ ಗಾತ್ರ : | |

North Korea Kim Jong Un

ಸೋಲ್: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರು ಕೊರೊನಾ ವೈರಸ್ ಸೋಂಕಿನ ಹಾಗೂ ಚಂಡಮಾರುತ ಕುರಿತು ಎಚ್ಚರಿಕೆ ನೀಡಲು ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪಾಲ್ಗೊಂಡಿರುವುದನ್ನು ಅಲ್ಲಿನ ಸರ್ಕಾರಿ ಮಾಧ್ಯಮ ಕೆಸಿಎನ್‌ಎ ವರದಿ ಮಾಡಿದೆ. ಉನ್ ಆರೋಗ್ಯ ಸ್ಥಿತಿ ಬಗ್ಗೆ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಊಹಾಪೋಹ ಹರಡುತ್ತಿರುವ ಮಧ್ಯೆಯೇ ಈ ವರದಿ ಪ್ರಕಟವಾಗಿದೆ.

ಕಿಮ್ ಅವರು ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವ್ಯವಸ್ಥೆಯಲ್ಲಿರುವ ಲೋಪಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಕೆಸಿಎನ್‌ಎ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: 

ಕಿಮ್ ಅವರು ಬಿಳಿ ಸೂಟ್ ಧರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಚಿತ್ರವನ್ನು ಕೊರಿಯಾದ 'ರೊಡಾಂಗ್ ಸಿನ್ಮುನ್' ಪತ್ರಿಕೆ ಸಹ ಪ್ರಕಟಿಸಿದೆ.

ಅನಾರೋಗ್ಯದಿಂದಾಗಿ ಕಿಮ್ ಅವರು ಇತ್ತೀಚೆಗೆ ಆಡಳಿತದಲ್ಲಿ ತಮ್ಮ ಸಹೋದರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸುತ್ತಿದ್ದರು ಎಂದು ದಕ್ಷಿಣ ಕೊರಿಯಾ ಬೇಹುಗಾರಿಕಾ ಸಂಸ್ಥೆ ಇತ್ತೀಚೆಗೆ ಹೇಳಿತ್ತು. ಕಿಮ್ ಜಾಂಗ್ ಉನ್ ಅವರು ಕೋಮಾದಲ್ಲಿದ್ದಾರೆ ಎಂದು ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಆಪ್ತ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಕೊರಿಯಾ ಹೆರಾಲ್ಡ್’ ಇತ್ತೀಚೆಗೆ ವರದಿ ಮಾಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು