ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಂದು ಕ್ಷಿಪಣಿ ಪ್ರಯೋಗ ನಡೆಸಿದ ಉತ್ತರ ಕೊರಿಯಾ

Last Updated 4 ಮೇ 2022, 5:11 IST
ಅಕ್ಷರ ಗಾತ್ರ

ಸಿಯೋಲ್: ಉತ್ತರ ಕೊರಿಯಾವು ಹೆಸರಿಡದ ಮತ್ತೊಂದು ಕ್ಷಿಪಣಿಯ ಪ್ರಯೋಗ ನಡೆಸಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.

ಬುಧವಾರದಂದು ಕ್ಷಿಪಣಿ ಉಡಾವಣೆ ಮಾಡಲಾಗಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಸೇನಾ ಮುಖ್ಯಸ್ಥರು ಹೇಳಿದ್ದಾರೆ. ಆದರೆ, ಕ್ಷಿಪಣಿ ಕುರಿತಾದ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ಮತ್ತಷ್ಟು ವೇಗಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ ಕೆಲವು ದಿನಗಳ ನಂತರ ಈ ಉಡಾವಣೆ ನಡೆದಿದೆ. ಪ್ಯೊಂಗ್ಯಾಂಗ್‌ನಲ್ಲಿ ನಡೆದ ಬೃಹತ್ ಮಿಲಿಟರಿ ಸಮಾವೇಶದ ಭಾಷಣದಲ್ಲಿ ಪ್ರಚೋದಿಸಿದವರ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಅವರು ಬೆದರಿಕೆ ಹಾಕಿದ್ದರು.

ಈ ಬೆಳವಣಿಗೆಯು ತಮ್ಮ ದೇಶದ ಮೇಲಿನ ಅಂತರರಾಷ್ಟ್ರೀಯ ನಿರ್ಬಂಧಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಒತ್ತಡ ಹೇರುವುದಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT