ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೊರಿಯಾದಲ್ಲಿ ಒಂದೇ ದಿನ 1.74 ಲಕ್ಷ ಮಂದಿಗೆ ಜ್ವರ: 21 ಸಾವು

Last Updated 14 ಮೇ 2022, 2:17 IST
ಅಕ್ಷರ ಗಾತ್ರ

ಸೋಲ್‌: ಉತ್ತರ ಕೊರಿಯಾದಲ್ಲಿ ಕೊರೊನಾ ವೈರಸ್‌ ಸೋಂಕಿನ ಮೊದಲ ಪ್ರಕರಣ ಕಾಣಿಸಿಕೊಂಡ ಕೆಲವೇ ದಿನಗಳಲ್ಲಿ 27 ಸಾವುಗಳು ಸಂಭವಿಸಿವೆ. ಶುಕ್ರವಾರ ಒಂದೇ ದಿನ 21 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

1,74,440 ಮಂದಿಗೆ ಹೊಸದಾಗಿ ಜ್ವರ ಮತ್ತು ಇತರ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಸರ್ಕಾರಿ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಜ್ವರದಿಂದ ಈ ವರೆಗೆ 27 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆಯಾದರೂ, ಕೊರೊನಾ ವೈರಸ್‌ ಸೋಂಕಿನಿಂದ ಸಂಭವಿಸಿದ ಸಾವುಗಳು ಎಷ್ಟು ಎಂಬುದು ಬಹಿರಂಗವಾಗಿದೆ.

ಮೇ ಆರಂಭದಿಂದ ಈ ವರೆಗೆ ಅಲ್ಲಿ 5,24,440 ಮಂದಿಗೆ ಜ್ವರ ಬಂದಿದ್ದು, 2,43,630 ಜನರು ಚೇತರಿಸಿಕೊಂಡಿದ್ದಾರೆ. 2,80,810 ಜನ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಉತ್ತರ ಕೊರಿಯಾ ಹೇಳಿದೆ. ಇದರಲ್ಲಿ ಎಷ್ಟು ಮಂದಿಗೆ ಕೋವಿಡ್‌ ಕಾರಣದಿಂದ ಜ್ವರ ಬಂದಿದೆ, ಎಷ್ಟು ಮಂದಿ ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದು ಖಚಿತವಾಗಿಲ್ಲ.

ಉತ್ತರ ಕೊರಿಯಾದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕೋವಿಡ್–19 ಪ್ರಕರಣಗಳು ಪತ್ತೆಯಾಗಿವೆ ಎಂದು ಮೇ 13ರಂದು ವರದಿಯಾಗಿತ್ತು. ಸೋಂಕು ಪ್ರಸರಣ ತಡೆಯಲು ಕಳೆದ ಗುರುವಾರದಿಂದ ತುರ್ತು ಪರಿಸ್ಥಿತಿ ಜಾರಿಗೊಳಿಸಲಾಗಿತ್ತು.

‘ಉತ್ತರ ಕೊರಿಯಾದ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ದೇಶದ 2.5 ಕೋಟಿ ಜನರು ಲಸಿಕೆ ಪಡೆಯದೇ ಇರುವ ಕಾರಣ ಕೋವಿಡ್‌ ಪ್ರಸರಣ ಎದುರಿಸಲು ಕಷ್ಟವಾಗಬಹುದು’ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT