ಶನಿವಾರ, ಮೇ 28, 2022
22 °C
ಕೊರೊನಾ ಸೋಂಕು ಸ್ಫೋಟ ಸಾಧ್ಯತೆ– ತಜ್ಞರ ಎಚ್ಚರಿಕೆ

ಉತ್ತರ ಕೊರಿಯಾ: ಕೋವಿಡ್‌ ಪ್ರಕರಣ ಪತ್ತೆ ಬೆನ್ನಲ್ಲೇ ಆರು ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೋಲ್‌: ದೇಶದಲ್ಲಿ ರೂಪಾಂತರಿ ಓಮೈಕ್ರಾನ್‌ ತಳಿ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ ಎಂದು ಉತ್ತರ ಕೊರಿಯಾ ಮೊದಲ ಬಾರಿಗೆ ಹೇಳಿದ ಬೆನ್ನಲ್ಲೇ, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಕೆಸಿಎನ್‌ಎ ಶುಕ್ರವಾರ ವರದಿ ಮಾಡಿದೆ.

ಮೃತಪಟ್ಟಿರುವ ಆರು ಜನರ ಪೈಕಿ ಒಬ್ಬ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿತ್ತು. ಉಳಿದವರೂ ಜ್ವರದಿಂದ ಬಳಲುತ್ತಿದ್ದರು, ಆದರೆ ಇವರ ಪೈಕಿ ಎಷ್ಟು ಜನರಿಗೆ ಕೋವಿಡ್‌ ದೃಢಪಟ್ಟಿತ್ತು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಮೂಲಗಳು ಹೇಳಿವೆ.

ದೇಶದಾದ್ಯಂತ ಜ್ವರ ದಿಢೀರ್‌ನೆ ವ್ಯಾಪಕವಾಗುತ್ತಿದ್ದು, ಈ ಸಂಬಂಧ 3.50 ಲಕ್ಷ ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೋವಿಡ್ ಪರೀಕ್ಷೆಗಳು ನಡೆಯುತ್ತಿಲ್ಲ. ಹೀಗಾಗಿ ಈಗ ದಿಢೀರ್‌ನೆ ವ್ಯಾಪಕವಾಗುತ್ತಿರುವ ಜ್ವರಕ್ಕೆ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ದೇಶದಲ್ಲಿ ಆರೋಗ್ಯ ವ್ಯವಸ್ಥೆ ಸರಿ ಇಲ್ಲ. ಜನರು ಲಸಿಕೆ ಪಡೆಯದಿಲ್ಲ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಜನರ ಸಂಖ್ಯೆಯೂ ಬಹಳಷ್ಟಿದೆ. ಈ ಎಲ್ಲ ಕಾರಣಗಳಿಂದ ಉತ್ತರ ಕೊರಿಯಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದೂ ಎಚ್ಚರಿಸಿದ್ದಾರೆ.

ಕೋವಿಡ್‌ನ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾದಲ್ಲಿ ಗುರುವಾರ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು