ಮಂಗಳವಾರ, ಅಕ್ಟೋಬರ್ 19, 2021
23 °C

ಉತ್ತರ ಕೊರಿಯಾ: ಶಬ್ದಕ್ಕಿಂತ ಐದು ಪಟ್ಟು ವೇಗದಲ್ಲಿ ಚಲಿಸಬಲ್ಲ ಕ್ಷಿಪಣಿ ಪರೀಕ್ಷೆ

ಪ್ರಜಾವಾಣಿ ವೆಬ್‌‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ರಾಯಿಟರ್ಸ್‌

ಸೋಲ್‌: ಶಬ್ದಕ್ಕಿಂತ ಐದು ಪಟ್ಟು ವೇಗವಾಗಿ ಚಲಿಸುವ ವಿಮಾನ ನಿಗ್ರಹ ಕ್ಷಿಪಣಿ ಪರೀಕ್ಷೆಯನ್ನು ಉತ್ತರ ಕೊರಿಯಾ ಯಶಸ್ವಿಯಾಗಿ ನಡೆಸಿದೆ.

ಪರಮಾಣು ಆಸ್ತ್ರ ಹೊಂದಿರುವ ಉತ್ತರ ಕೊರಿಯಾ ನಡೆಸಿರುವ ವಿಮಾನ ನಿಗ್ರಹ ಕ್ಷಿಪಣಿಗೆ ಎರಡು ರಾಡಾರ್‌ ನಿಯಂತ್ರಕಗಳು ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಇದೊಂದು ಅಸಾಧಾರಣವಾದ ಯುದ್ಧ ಸಾಧನ ಎಂದು ಕೊರಿಯನ್‌ ಸೆಂಟ್ರಲ್‌ ನ್ಯೂಸ್‌ ಏಜೆನ್ಸಿಯ ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಉತ್ತರ ಕೊರಿಯಾ ನಡೆಸಿದ 4ನೇ ಕ್ಷಿಪಣಿ ಪರೀಕ್ಷೆ ಇದಾಗಿದೆ. ಸೆಪ್ಟೆಂಬರ್‌ ತಿಂಗಳಲ್ಲಿ ಹಡಗಿನ ಮೂಲಕ ಉಡಾಯಿಸಲಾಗುವ ದೂರಗಾಮಿ ಕ್ಷಿಪಣಿ ಪರೀಕ್ಷೆಯನ್ನು ನಡೆಸಿತ್ತು.

ಗುರುತಿಸಲಾಗದ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ: ದಕ್ಷಿಣ ಕೊರಿಯಾ ಸೇನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು