ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕೋಮಾದಲ್ಲಿ?

ದಕ್ಷಿಣ ಕೊರಿಯಾ ಮಾಜಿ ಅಧಿಕಾರಿ ಹೇಳಿಕೆ
Last Updated 24 ಆಗಸ್ಟ್ 2020, 1:21 IST
ಅಕ್ಷರ ಗಾತ್ರ

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎಂದು ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಆಪ್ತ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಕೊರಿಯಾ ಹೆರಾಲ್ಡ್’ ವರದಿ ಮಾಡಿದೆ.

ಕಿಮ್ ಜಾಂಗ್ ಉನ್‌ಗೆ ಅನಾರೋಗ್ಯವಿದೆ ಎಂಬ ಬಗ್ಗೆ ದೀರ್ಘ ಕಾಲದಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನುಮಾನವಿದೆ.

ಕಿಮ್ ಅವರು ಇತ್ತೀಚೆಗೆ ತಮ್ಮ ಸಹೋದರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸುತ್ತಿದ್ದರು. ಇದು ಅವರು ಅನಾರೋಗ್ಯಕ್ಕೀಡಾಗಿರುವುದರ ಸಂಕೇತ ಎಂದು ದಕ್ಷಿಣ ಕೊರಿಯಾದ ರಾಜ್ಯ ವ್ಯವಹಾರಗಳ ಮೇಲ್ವಿಚಾರಣಾ ಕಚೇರಿಯ ಮುಖ್ಯಸ್ಥರಾಗಿದ್ದ ಚಾಂಗ್ ಸಾಂಗ್ ಮಿನ್ ಹೇಳಿದ್ದಾರೆ.

‘ಕಿಮ್ ಜಾಂಗ್ ಉನ್ ಕೋಮಾದಲ್ಲಿದ್ದಾರೆ ಎಂದು ಭಾವಿಸಿದ್ದೇನೆ. ಸದ್ಯ ಉತ್ತರ ಕೊರಿಯಾದ ಆಡಳಿತ ಉನ್ ಸಹೋದರಿ ಕಿಮ್ ಯೊ ಜಾಂಗ್ ಕೈಯಲ್ಲಿದೆ’ ಎಂದೂ ಅವರು ಹೆಳಿದ್ದಾರೆ.

ದಕ್ಷಿಣ ಕೊರಿಯಾದ ಬೆಹುಗಾರಿಕಾ ಸಂಸ್ಥೆಯೂ ಉತ್ತರ ಕೊರಿಯಾದ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿರುವ ಬಗ್ಗೆ ಸುಳಿವು ನೀಡಿದೆ.

ಆದಾಗ್ಯೂ, ಕಿಮ್ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಕಿಮ್ ಜಾಂಗ್ ಉನ್ ಅನಾರೋಗ್ಯದ ಬಗ್ಗೆ ಏಪ್ರಿಲ್‌ನಲ್ಲಿಯೂ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಊಹಾಪೋಹ ಹರಡಿತ್ತು. ಅವರು ಮೃತಪಟ್ಟಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿಯೂ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಬಳಿಕ ಉನ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT