ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಕುರಿತು ಬ್ರಿಟನ್ನ ಬಿಬಿಸಿ ನಿರ್ಮಿಸಿರುವ ವಿವಾದಿತ ಸಾಕ್ಷ್ಯಚಿತ್ರದ ಸರಣಿ ಬಗ್ಗೆ ತನಗೆ ತಿಳಿದಿಲ್ಲ ಎಂದಿರುವ ಅಮೆರಿಕ, ಈ ವಿವಾದದಿಂದ ಅಂತರ ಕಾಯ್ದುಕೊಂಡಿದೆ.

‘ಅಭಿವೃದ್ಧಿ ಹೊಂದಿದ, ಚಲನಶೀಲ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ ಅಮೆರಿಕ ಮತ್ತು ಭಾರತವು ಉತ್ತಮ ಮೌಲ್ಯಗಳನ್ನು ಹಂಚಿಕೊಳ್ಳುವುದರಲ್ಲಿ ಚಿರಪರಿಚಿತವಾಗಿವೆ. ಉಭಯ ರಾಷ್ಟ್ರಗಳ ನಡುವೆ ಅಸಾಧಾರಣ ಮತ್ತು ಆಳವಾದ ಪಾಲುದಾರಿಕೆ ಇದೆ’ ಎಂದು ಅಮೆರಿಕ ವಿದೇಶಾಂಗ ಸಚಿವಾಲಯದ ವಕ್ತಾರ ನೆಡ್ ಪ್ರೈಸ್ ಅವರು ಪಾಕಿಸ್ತಾನಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಪಾಕ್ ಪತ್ರಕರ್ತರು ಬಿಬಿಸಿ ಸಾಕ್ಷ್ಯ ಚಿತ್ರದ ಬಗ್ಗೆಯೇ ಪ್ರಶ್ನೆಗಳನ್ನು ಕೇಂದ್ರೀಕರಿಸಿದಾಗ ಪ್ರೈಸ್ ಅವರು ‘ನೀವು ಉಲ್ಲೇಖಿಸುತ್ತಿರುವ ಸಾಕ್ಷ್ಯಚಿತ್ರದ ಬಗ್ಗೆ ತಿಳಿದಿಲ್ಲ. ಉಭಯ ರಾಷ್ಟ್ರಗಳು ಹಂಚಿಕೊಂಡಿರುವ ಸಮಾನ ಮೌಲ್ಯಗಳನ್ನು ಹೊಂದಿವೆ. ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಾಢವಾಗಿ ಬೆಸೆಯುವಂತೆ ಜಾಗತಿಕ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಂಬಂಧಗಳಂತಹ ಅಂಶಗಳನ್ನು ಬಲಪಡಿಸಲು ನಾವು ಎದುರು ನೋಡುತ್ತಿದ್ದೇವೆ’ ಎಂದು ಹೇಳಿದರು.

ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2002ರಲ್ಲಿ ನಡೆದ ಗುಜರಾತ್ ಗಲಭೆ ಕುರಿತು ಎರಡು ಭಾಗಗಳಲ್ಲಿ ನಿರ್ಮಿಸಿರುವ ವಿವಾದಿತ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಬಿಬಿಸಿ ಆಳವಾದ ತನಿಖಾ ಆಯಾಮದಲ್ಲಿ ನಿರ್ಮಿಸಿರುವುದಾಗಿ ಪ್ರತಿಪಾದಿಸಿದೆ. ಈ ಸಾಕ್ಷ್ಯಚಿತ್ರವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಇದೊಂದು ಅಪಪ್ರಚಾರದ ಸರಕು ಎಂದು ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.