ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಏರಿಕೆ

Last Updated 7 ಏಪ್ರಿಲ್ 2022, 13:58 IST
ಅಕ್ಷರ ಗಾತ್ರ

ಅಮೆರಿಕ (ಪಿಟಿಐ): ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ2021ನೇ ಸಾಲಿನಲ್ಲಿ ಶೇ 12ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಚೀನಾದ ವಿದ್ಯಾರ್ಥಿಗಳ ಸಂಖ್ಯೆ ಶೇ 8ಕ್ಕಿಂತ ಕಡಿಮೆಯಾಗಿದೆ ಎಂದು ಅಮೆರಿಕದ ಪೌರತ್ವ ಮತ್ತು ವಲಸೆ ಸೇವೆಗಳು (ಯುಎಸ್‌ಸಿಐಎಸ್‌) ಬಿಡುಗಡೆಗೊಳಿಸಿದ ವರದಿಯು ತಿಳಿಸಿದೆ.

ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ದಾಖಲಾತಿಯು ಕೋವಿಡ್‌ ಕಾರಣದಿಂದಾಗಿ ಇಳಿಮುಖವಾಗಿದೆ. ಅಂಕಿ ಅಂಶದ ಪ್ರಕಾರ, 2021ರಲ್ಲಿ ಅಮೆರಿಕದಲ್ಲಿ ಒಟ್ಟಾರೆ 12.36 ಲಕ್ಷ ವಿದೇಶಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದು, 2020ನೇ ಸಾಲಿಗೆ ಹೋಲಿಕೆ ಮಾಡಿದರೆ ಶೇ 1.2ರಷ್ಟು ಕಡಿಮೆ.

ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲು 8,038 ಶೈಕ್ಷಣಿಕ ಸಂಸ್ಥೆಗಳು ಅರ್ಹತೆ ಹೊಂದಿದ್ದವು. ಕಳೆದ ಸಾಲಿನಲ್ಲಿ 8,369 ಸಂಸ್ಥೆಗಳು ಅರ್ಹತೆ ಪಡೆದುಕೊಂಡಿದ್ದವು. ಈ ವರ್ಷ 280 ಸಂಸ್ಥೆಗಳು ಕಡಿಮೆಯಾಗಿದ್ದವು.

ಪ್ರಸ್ತಕ ಸಾಲಿನಲ್ಲಿ ಚೀನಾ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿದರೂ 3.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಚೀನಾ ಮೊದಲ ಸ್ಥಾನದಲ್ಲಿದೆ. ಭಾರತದ 2.32 ಲಕ್ಷ ವಿದ್ಯಾರ್ಥಿಗಳು ತೆರಳಿದ್ದು, 2ನೇ ಸ್ಥಾನದಲ್ಲಿದೆ. ಇವರಲ್ಲಿ ವಿದ್ಯಾರ್ಥಿನಿಯರ ಪ್ರಮಾಣ ಶೇ 37.

ನಂತರದ ಸ್ಥಾನಗಳಲ್ಲಿ ದಕ್ಷಿಣ ಕೊರಿಯಾ (58,787), ಕೆನಡಾ (37,453), ಬ್ರೇಜಿಲ್‌ (33,552), ವಿಯೆಟ್ನಾಂ (29,597), ಸೌದಿ ಅರಬಿಯಾ (28,600), ತೈವಾನ್‌ (25,406), ಜಪಾನ್‌ (20,144) ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT