ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೇನ್‌ನ ನರ್ಸಿಂಗ್‌ ಹೋಂನ್‌ಲ್ಲಿ ಬೆಂಕಿ; 5 ಮಂದಿ ಸಾವು

Last Updated 19 ಜನವರಿ 2022, 11:07 IST
ಅಕ್ಷರ ಗಾತ್ರ

ಮ್ಯಾಡ್ರಿಡ್‌: ಸ್ಪೇನ್‌ನ ಪೂರ್ವ ಭಾಗದ ವೆಲೆಂಸಿಯಾ ಪ್ರದೇಶದ ಮೊಂಕಾಡಾ ಎಂಬಲ್ಲಿ ಬುಧವಾರ ನರ್ಸಿಂಗ್ ಹೋಂ ಒಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಹಾಗೂ 11 ಮಂದಿ ಗಾಯಗೊಂಡಿದ್ದಾರೆ.‌

ಬೆಂಕಿ ಆಕಸ್ಮಿಕ ಸಂಭವಿಸಿದಾಗ ನರ್ಸಿಂಗ್ ಹೋಂನಲ್ಲಿ 70 ಮಂದಿ ಇದ್ದರು. ಅಪಾಯದಲ್ಲಿ ಸಿಲುಕಿದ್ದ 25 ಮಂದಿಯನ್ನು ರಕ್ಷಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಏನು ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT