ಮಂಗಳವಾರ, ಜನವರಿ 19, 2021
22 °C

ಅಫ್ಗಾನಿಸ್ತಾನ: ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟ; ಮೂರು ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಘಾನಿಸ್ತಾನದ ಕಾಬೂಲ್‌ನ ರಸ್ತೆಬದಿಯಲ್ಲಿ ಭಾನುವಾರ ಬಾಂಬ್ ಸ್ಫೋಟಗೊಂಡಿದ್ದು, ಇದರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ. 

ಅಫ್ಗಾನಿಸ್ತಾನ ಸರ್ಕಾರವು ಕತಾರ್‌ನಲ್ಲಿ ತಾಲಿಬಾನ್‌ ಜೊತೆಗಿನ ಶಾಂತಿಮಾತುಕತೆಯನ್ನು ಮುಂದುವರಿಸಿದೆ. ಈ ಸಂದರ್ಭದಲ್ಲೇ ಕಾಬೂಲ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದೆ.

‘ಭದ್ರತಾ ಸಿಬ್ಬಂದಿ ಸೇರಿದಂತೆ ಒಟ್ಟು ಮೂರು ಮಂದಿ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ. ಒಬ್ಬರಿಗೆ ಗಂಭೀರ ಗಾಯಗಳಾಗಿವೆ’ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ಅವರು ತಿಳಿಸಿದರು.

ಈವರೆಗೂ ಯಾವುದೇ ಸಂಘಟನೆಯೂ ಈ ದಾಳಿಯ ಹೊಣೆಯನ್ನು ಹೊತ್ತಕೊಂಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು