ಮಂಗಳವಾರ, ನವೆಂಬರ್ 24, 2020
21 °C

ಅಫ್ಗಾನಿಸ್ತಾನ: ಆತ್ಮಾಹುತಿ ದಾಳಿ, ನಾಲ್ವರ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದ ಪೊಲೀಸ್ ನೆಲೆಯ ಮೇಲೆ ಕಾರಿನ ಮೂಲಕ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ನಾಗರಿಕರು ಸೇರಿದಂತೆ 40 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.

ಭಾನುವಾರ ರಾತ್ರಿ ಆತ್ಮಾಹುತಿ ದಾಳಿ ನಡೆಸಲಾಗಿದೆ. ಇದರ ಬೆನ್ನಲ್ಲೇ ಉಗ್ರರು ಕೆಲವು ಮನೆಗಳನ್ನು ಸ್ಫೋಟಗೊಳಿಸಿದ್ದಾರೆ. ಸದ್ಯ ಈ ಮನೆಗಳಲ್ಲಿ ಆರೋಗ್ಯ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಕಂದಹಾರ್‌ನ ಸಾರ್ವಜನಿಕ ಆರೋಗ್ಯ ಇಲಾಖೆಯ ಪ್ರಾಂತೀಯ ನಿರ್ದೇಶಕ ಮೊಹಮ್ಮದ್ ಅಶ್ರಫ್ ನಾಡೆರಿ ಅವರು ಮಾಹಿತಿ ನೀಡಿದರು.

ಈವರೆಗೆ ಯಾವುದೇ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್‌ ಉಗ್ರ ಸಂಘಟನೆಯು ಈ ದಾಳಿಯನ್ನು ನಡೆಸಿರಬಹುದೆಂದು ಶಂಕಿಸಲಾಗಿದೆ. 2001ರಲ್ಲಿ ಅಮೆರಿಕವು ಅಫ್ಗಾನಿಸ್ತಾನದ ಮೇಲೆ ಆಕ್ರಮಣ ನಡೆಸಿದಾಗಿನಿಂದ ಕಂದಹಾರ್‌ ಉಗ್ರ ಸಂಘಟನೆಗಳ ಭದ್ರಕೋಟೆಯಾಗಿದೆ.

ತಾಲಿಬಾನ್ ಮತ್ತು ಅಫ್ಗಾನಿಸ್ತಾನ ಸರ್ಕಾರದ ನಡುವೆ ಶಾಂತಿ ಮಾತುಕತೆ ನಡೆಯುತ್ತಿದೆ. ಆದರೂ ಇತ್ತೀಚಿನ ದಿನಗಳಲ್ಲಿ ಅಫ್ಗಾನಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗಿದೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು