ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಓಮೈಕ್ರಾನ್‌ನ ಮೊದಲ ಪ್ರಕರಣ ಪತ್ತೆ

Last Updated 2 ಡಿಸೆಂಬರ್ 2021, 2:10 IST
ಅಕ್ಷರ ಗಾತ್ರ

ಕ್ಯಾಲಿಫೋರ್ನಿಯಾ: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ ಮೊದಲ ಪ್ರಕರಣವು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬುಧವಾರ ಪತ್ತೆಯಾಗಿದೆ.

ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ಪ್ರಯಾಣಿಕನಲ್ಲಿ ಓಮೈಕ್ರಾನ್‌ನ ಸೋಂಕು ಇರುವುದು ದೃಢಪಟ್ಟಿದೆ ಎಂದು ಅಮೆರಿಕಘೋಷಿಸಿದೆ.

ಓಮೈಕ್ರಾನ್‌ ಸೋಂಕು ಪತ್ತೆಯಾಗಿರುವ ವ್ಯಕ್ತಿಯು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದು, ಯಾವುದೇ ಬೂಸ್ಟರ್‌ ಡೋಸ್‌ ಸ್ವೀಕರಿಸಿಲ್ಲ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

ಓಮೈಕ್ರಾನ್‌ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಬರುವ ಪ್ರಯಾಣಕರ ಮೇಲೆ ಕಠಿಣ ನಿರ್ಬಂಧ ಹೇರಲು ಅಲ್ಲಿನ ಸರ್ಕಾರ ಮುಂದಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ದಕ್ಷಿಣ ಆಫ್ರಿಕಾ, ಬೋಟ್ಸ್‌ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್‌ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್‌ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT