ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌: ಏಪ್ರಿಲ್‌ ಅಂತ್ಯಕ್ಕೆ 75 ಸಾವಿರ ಜನರ ಸಾವು ಸಾಧ್ಯತೆ- ಅಧ್ಯಯನ

Last Updated 13 ಡಿಸೆಂಬರ್ 2021, 12:43 IST
ಅಕ್ಷರ ಗಾತ್ರ

ಲಂಡನ್‌: ಕೊರೊನಾ ವೈರಸ್‌ನ ಓಮೈಕ್ರಾನ್‌ ತಳಿ ಸೋಂಕು ಪ್ರಸರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ, ಈ ತಳಿಯು ಬ್ರಿಟನ್‌ನಲ್ಲಿ ಮುಂದಿನ ವರ್ಷ ಏಪ್ರಿಲ್ ವೇಳೆಗೆ 75 ಸಾವಿರ ಜನರ ಸಾವಿಗೆ ಕಾರಣವಾಗಬಹುದು ಎಂದು ಅಧ್ಯಯನವೊಂದು ಹೇಳಿದೆ.

ಲಂಡನ್‌ ಸ್ಕೂಲ್‌ ಆಫ್‌ ಹೈಗಿನ್ ಆ್ಯಂಡ್ ಟ್ರಾಪಿಕಲ್ ಮೆಡಿಸಿನ್‌ನ ಸಂಶೋಧಕರು ಈ ಕುರಿತು ಅಧ್ಯಯನ ನಡೆಸಿದ್ದಾರೆ.

ಈ ವರ್ಷ ಜನವರಿಯಲ್ಲಿ ವರದಿಯಾಗಿದ್ದಕ್ಕಿಂತಲೂ ಹೆಚ್ಚು ಪ್ರಕರಣಗಳು ಕಂಡುಬರಬಹುದು ಹಾಗೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಅಧಿಕವಾಗಿರಲಿದೆ ಎಂದು ಸಂಶೋಧಕರು ಆತಂಕ ವ್ಯಕ್ತಪಡಿಸಿದ್ದಾರೆ.

ವ್ಯಕ್ತಿಯ ದೇಹದಲ್ಲಿನ ಪ್ರತಿಕಾಯಗಳಿಂದ ತಪ್ಪಿಸಿಕೊಳ್ಳುವ ಗುಣವನ್ನು ಓಮೈಕ್ರಾನ್ ಹೊಂದಿದೆ. ಈ ತಳಿಯು ದೇಹದಲ್ಲಿನ ರೋಗನಿರೋಧಕ ಶಕ್ತಿಯಿಂದಲೂ ತಪ್ಪಿಸಿಕೊಳ್ಳುವುದೇ ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಸಂಶೋಧಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT