ಶುಕ್ರವಾರ, ಆಗಸ್ಟ್ 12, 2022
23 °C

ಅಮೆರಿಕದಲ್ಲಿ ಓಮೈಕ್ರಾನ್ ಹಾವಳಿ: ವೇಗವಾಗಿ ಹರಡುತ್ತಿದೆ ಕೊರೊನಾ ವೈರಸ್ ಹೊಸ ತಳಿ

ಎಪಿ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಅಮೆರಿಕದಲ್ಲಿ ಒಂದು ವಾರದ ಅವಧಿಯಲ್ಲಿ ಪತ್ತೆಯಾದ ಒಟ್ಟು ಕೋವಿಡ್‌ ಪ್ರಕರಣಗಳಲ್ಲಿ ಶೇ 73.2ರಷ್ಟು ಓಮೈಕ್ರಾನ್ ಪ್ರಕರಣಗಳಾಗಿವೆ ಎಂದು ಅಮೆರಿಕದ ಆರೋಗ್ಯ ಇಲಾಖೆ ಹೇಳಿದೆ.

ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರವು (ಸಿಡಿಸಿಪಿ) ನೀಡಿರುವ ವರದಿಯ ಆಧಾರದಲ್ಲಿ ಸರ್ಕಾರವು ಹೀಗೆ ಹೇಳಿದೆ. ದೇಶದಲ್ಲಿ ಓಮೈಕ್ರಾನ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ, ದೇಶದಲ್ಲಿ ಒಟ್ಟು 50 ಕೋಟಿ ಕೋವಿಡ್‌ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲು ಸರ್ಕಾರವು ತೀರ್ಮಾನಿಸಿದೆ ಎಂದು ಅಧ್ಯಕ್ಷ ಜೋ ಬೈಡನ್ ಅವರು ಟ್ವೀಟ್ ಮಾಡಿದ್ದಾರೆ.

ಓಮೈಕ್ರಾನ್‌ ಹರಡುವುದನ್ನು ತಡೆಯುವ ಉದ್ದೇಶದಿಂದ ಹಲವು ರಾಜ್ಯಗಳಲ್ಲಿ ಕ್ರಿಸ್‌ಮಸ್‌ ಸಮಾರಂಭ ಮತ್ತು ಹೊಸ ವರ್ಷಾಚರಣೆಯನ್ನು ನಿರ್ಬಂಧಿಸಲಾಗಿದೆ. ಓಮೈಕ್ರಾನ್‌ ನಿಯಂತ್ರಣ ಕಾರ್ಯದಲ್ಲಿ ಸೇನೆಯನ್ನು ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಬೈಡನ್‌ ಹೇಳಿದ್ದಾರೆ.

* ಜರ್ಮನಿಯಲ್ಲಿ ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡ ಮೂರು ತಿಂಗಳ ನಂತರ, ಬೂಸ್ಟರ್‌ ಡೋಸ್‌ ನೀಡುವಂತೆ ತಜ್ಞರ ಸಮಿತಿ ಶಿಫಾರಸು ಮಾಡಿದೆ

* ಅಮೆರಿಕದಿಂದ ಬರುವ ಪ್ರಯಾಣಿಕರ ಪ್ರವೇಶವನ್ನು ನಿಷೇಧಿಸಿ ಇಸ್ರೇಲ್‌ ಸರ್ಕಾರ ಆದೇಶ ಹೊರಡಿಸಿದೆ

* ಸ್ವೀಡನ್‌ನಲ್ಲಿ ಒಂದೇ ದಿನ 15,000 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇದು ಈವರೆಗೆ ದಿನವೊಂದರಲ್ಲಿ ಪತ್ತೆಯಾದ ಪ್ರಕರಣಗಳ ಗರಿಷ್ಠ ಸಂಖ್ಯೆಯಾಗಿದೆ. ಇವುಗಳಲ್ಲಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ ಎಷ್ಟು ಎಂಬುದು ಬಹಿರಂಗವಾಗಿಲ್ಲ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು