ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ನೆಲದಲ್ಲಿ ಅಪ್ಪಳಿಸಿದ ಭಾರತದ ಕ್ಷಿಪಣಿ: ಆಕಸ್ಮಿಕ ಘಟನೆ ಎಂದ ಅಮೆರಿಕ

Last Updated 15 ಮಾರ್ಚ್ 2022, 9:43 IST
ಅಕ್ಷರ ಗಾತ್ರ

ವಾಷಿಂಗ್ಟನ್: ‘ಆಕಸ್ಮಿಕವಾಗಿ ಭಾರತದ ಕ್ಷಿಪಣಿ ಪಾಕಿಸ್ತಾನದ ನೆಲಕ್ಕೆ ಅಪ್ಪಳಿಸಿದ ಘಟನೆಗೆ ಸಂಬಂಧಿಸಿದಂತೆ ಗುರುತು ಪತ್ತೆಯಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ’ ಎಂದು ಅಮೆರಿಕ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ವಿದೇಶಾಂಗ ಸಚಿವಾಲಯದ ವಕ್ತಾರ ನೆಡ್‌ ಪ್ರೈಸ್, ‘ನಮ್ಮ ಪಾಲುದಾರಿಕೆ ರಾಷ್ಟ್ರ ಭಾರತದಿಂದ ಕ್ಷಿಪಣಿಯೊಂದು ಪಾಕಿಸ್ತಾನ ನೆಲದಲ್ಲಿ ಅಪ್ಪಳಿಸಿರುವ ಘಟನೆ ಆಕಸ್ಮಿಕವಾಗಿ ನಡೆದಿದೆ ಹೊರತು ಬೇರೇನೂ ಇಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮಾರ್ಚ್ 9ರಂದು ನಿಖರವಾಗಿ ಏನಾಯಿತು ಎಂಬುದನ್ನು ಭಾರತೀಯ ರಕ್ಷಣಾ ಸಚಿವಾಲಯ ಈಗಾಗಲೇ ವಿವರಣೆ ನೀಡಿದೆ. ಅದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆಯನ್ನು ನಾವು ನೀಡುವುದಿಲ್ಲ’ ಎಂದು ಪ್ರೈಸ್ ಹೇಳಿದ್ದಾರೆ.

ಭಾರತ ಸೇನೆಯ ಶರವೇಗದ ಸೂಪರ್‌ ಸಾನಿಕ್‌ ಕ್ಷಿಪಣಿಯೊಂದು ನಿರ್ವಹಣೆ ಮಾಡುವಾಗ ಆಕಸ್ಮಿಕವಾಗಿ ಸಿಡಿದು ಪಾಕಿಸ್ತಾನದ ನೆಲದ ಮೇಲೆ ಈಚೆಗೆ ಬಿದ್ದಿತ್ತು.

ಮಾರ್ಚ್ 9ರಂದು ಭಾರತದ ಸೂರತ್‌ಗಡದಿಂದ ಹಾರಿದ ‘ಸೂಪರ್‌ ಸಾನಿಕ್ ಫ್ಲೈಯಿಂಗ್ ಆಬ್ಜೆಕ್ಟ್’ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಿಯಾನ್ ಚುನ್ನು ನಗರದ ಸಮೀಪ ನೆಲಕ್ಕೆ ಅಪ್ಪಳಿಸಿತ್ತು.

ದಿನನಿತ್ಯದ ನಿರ್ವಹಣೆಯ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಆಕಸ್ಮಿಕವಾಗಿ ಕ್ಷಿಪಣಿ ಹಾರಿದೆ ಎಂದು ಭಾರತದ ‌ರಕ್ಷಣಾ ಸಚಿವಾಲಯ ಶುಕ್ರವಾರ ಸ್ಪಷ್ಟನೆ ನೀಡಿದೆ.

ಆಕಸ್ಮಿಕವಾಗಿ ಭಾರತದ ಕ್ಷಿಪಣಿ ಪಾಕಿಸ್ತಾನದ ನೆಲಕ್ಕೆ ಅಪ್ಪಳಿಸಿದ ಘಟನೆಗೆ ಸಂಬಂಧಿಸಿದಂತೆ ಉಭಯ ದೇಶಗಳು ಶೀಘ್ರವೇ ಮಾತುಕತೆ ನಡೆಸಬೇಕು ಎಂದು ಚೀನಾ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT