ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌: ಸೋಂಕು ಏರುಗತಿ; ತುರ್ತು ಪರಿಸ್ಥಿತಿ ಘೋಷಣೆ ಸಾಧ್ಯತೆ

Last Updated 9 ಜನವರಿ 2021, 17:35 IST
ಅಕ್ಷರ ಗಾತ್ರ

ಟೋಕಿಯೊ: ಕೋವಿಡ್ 19 ಸೋಂಕು ಹರಡುವಿಕೆ ನಿಯಂತ್ರಿಸಲು ಜಪಾನ್‌ನ ಒಸಾಕಾ, ಕ್ಯೊಟೊ, ಹ್ಯೊಗೊ ಮೊದಲಾದ ನಗರಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸುವ ಸಾಧ್ಯತೆಯಿದೆ.

ಈ ಕುರಿತು ಮಾಹಿತಿ ನೀಡಿರುವ ಜಪಾನ್ ಹಣಕಾಸು ಸಚಿವ ಯಸುತೋಷಿ ನಿಶಿಮುರಾ, ‘ಮೂರೂ ರಾಜ್ಯಗಳ ಗವರ್ನರ್‌ಗಳ ಮನವಿ ಮೇರೆಗೆ ತುರ್ತುಸ್ಥಿತಿ ಹೇರುವ ವಿಚಾರ ಪರಿಶೀಲಿಸಲಾಗುತ್ತಿದೆ’ ಎಂದಿದ್ದಾರೆ.

ರಾಜಧಾನಿ ಟೋಕಿಯೊ ಹಾಗೂ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಗುರುವಾರ ಸೀಮಿತ ತುರ್ತುಸ್ಥಿತಿಯನ್ನು ಘೋಷಿಸಲಾಗಿತ್ತು. ಟೋಕಿಯೊದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿನಿತ್ಯ 2,000ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ.

ಅಮೆರಿಕದಲ್ಲಿ ನಿತ್ಯ 2 ಲಕ್ಷ ಪ್ರಕರಣ:

ಅಮೆರಿಕದಲ್ಲಿ ಹೊಸ ವರ್ಷಾರಂಭದಲ್ಲಿ ಕೋವಿಡ್ ಪ್ರಕರಣಗಳು ಹೊಸ ದಾಖಲೆ ಬರೆಯುತ್ತಿವೆ. ಪ್ರತಿನಿತ್ಯ 2 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಒಂದು ವಾರದ ಅವಧಿಯಲ್ಲಿ ಪ್ರಕರಣಗಳ ಸಂಖ್ಯೆ 2 ಲಕ್ಷದಿಂದ 3 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 2.20 ಕೋಟಿ ಒಟ್ಟು ಪ್ರಕರಣಗಳು ವರದಿಯಾಗಿವೆ. ಈ ಪೈಕಿ 3.74 ಲಕ್ಷ ಜನರು ಮೃತಪಟ್ಟಿದ್ದಾರೆ.

ಕ್ಯಾಲಿಫೋರ್ನಿಯಾ, ಫ್ಲಾರಿಡಾ ಸೇರಿದಂತೆ ಅಮೆರಿಕದ 8 ರಾಜ್ಯಗಳಲ್ಲಿ ಕೊರೊನಾ ವೈರಸ್‌ನ ಹೊಸ ರೂಪವೊಂದು ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂತಹ 63 ಪ್ರಕರಣಗಳು ವರದಿಯಾಗಿವೆ.

ಈ ರೂಪಾಂತರವು ಅಮೆರಿಕದಲ್ಲಿ ಹೆಚ್ಚು ವ್ಯಾಪಕವಾಗಿ ಹರಡಬಹುದು ಎಂದು ಸಾಂಕ್ರಾಮಿಕ ರೋಗ ತಜ್ಞ ಆಂಥೋನಿ ಫೌಸಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT